ಹಾವೇರಿ: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲು ಮಾಡಲಾಗಿದೆ. ಯಾವುದೇ ಅನುಮತಿ ಪಡೆಯದೆ ಪಕ್ಷದ ಬಾವುಟ ಹಿಡಿದುಕೊಂಡು ಮೆರವಣಿಗೆ ನಡೆಸಿದ ಆರೋಪದಡಿ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್, ಹಾನಗಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗನಗೌಡ ಪಾಟೀಲ್ ಮತ್ತು ಬಿಜೆಪಿ ಉಪಾಧ್ಯಕ್ಷ ರವಿರಾಜ್ ಕಲಾಲ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಅ.7 ರಂದು ನಾಮಪತ್ರ ಸಲ್ಲಿಕೆ ಮಾಡಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮತ್ತು ಜೆಡಿಎಸ್ ನ ನಿಯಾಜ್ ಶೇಖ್ ಹಾಗೂ ನಿನ್ನೆ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಪರಂ ವಿರುದ್ಧ ಜೋಡೆತ್ತಾದ ಸಿದ್ದು, ಡಿಕೆಶಿ – ರಾಷ್ಟ್ರ ರಾಜಕಾರಣಕ್ಕೆ ಮಾಜಿ ಡಿಸಿಎಂ ಕಳುಹಿಸಲು ತಂತ್ರ
ಫ್ಲೈಯಿಂಗ್ ಸ್ಕ್ವಾಡ್ ಗಳಾದ ರಾಘವೇಂದ್ರ ಹರಿಗೌಡರ, ಮಂಜಪ್ಪ ಗುಂಡಪಲ್ಲಿ ಮತ್ತು ರಾಘವೇಂದ್ರ ಹರಿಗೋಲ್ ಎಂಬವರು ದೂರು ದಾಖಲು ಮಾಡಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ ವಿರುದ್ಧ ಪ್ರಕರಣ ದಾಖಲು ಮಾಡಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಬಿಟ್ಟು ಪಕ್ಷದ ಮುಖಂಡರ ಮೇಲೆ ಕೇಸ್ ಮಾಡಲಾಗಿದೆ.