ಬೆಂಗಳೂರು: ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದ ಬಿಜೆಪಿಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಡಿಜಿಪಿಗೆ ದೂರು ನೀಡಲಾಗಿದೆ.
ವಿಧಾನ ಸಭಾ ಕಲಾಪದಲ್ಲಿ ಶುಕ್ರವಾರ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ವಿಶ್ವಾಸ ಮತಯಾಚನೆ ಮಾಡುವ ವೇಳೆ ಯಡಿಯೂರಪ್ಪ ಭಾಷಣ ಮಾಡುತ್ತಿದ್ದರು. ಭಾಷಣದ ಕೊನೆಯಲ್ಲಿ ಕೋಪಗೊಂಡ ಅವರು ರೈತರ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್ ಗಳ ಸಾಲ ಮನ್ನಾ ಮಾಡದಿದ್ದರೆ ಕರ್ನಾಟಕ ಬಂದ್ ಮಾಡುವುದಾಗಿ ಕರೆ ಕೊಟ್ಟಿದ್ದರು. ಆದರೆ ಇಂದು ಅವರೇ ಉಲ್ಟಾ ಹೊಡೆದು ರೈತರೇ ಪ್ರತಿಭಟನೆ ಮಾಡುತ್ತಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಬಂದ್ ಎನ್ನುವುದಕ್ಕಿಂತ ರೈತರೇ ಬಂದ್ ಮಾಡ್ತಾರೆ- ಬಿಎಸ್‍ವೈ
Advertisement
ಈ ಸಂಬಂಧ ಯಡಿಯೂರಪ್ಪ ಬಂದ್ ಗೆ ಕರೆ ಕೊಟ್ಟಿರುವುದು ಅಕ್ರಮ ಎಂದು ವಕೀಲ ಸೂರ್ಯ ಮುಕುಂದ್ ರಾಜ್ ಅವರು ಡಿಜಿಪಿಗೆ ದೂರು ನೀಡಿದ್ದಾರೆ.
Advertisement
ಈ ಹಿಂದೆ ಬಂದ್ ಮಾಡಿದಾಗ ಸುಪ್ರೀಂ ಕೋರ್ಟ್, ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುವ ಬಂದ್ ಅಕ್ರಮ ಎಂದು ತೀರ್ಪು ಕೊಟ್ಟಿತ್ತು. ಈಗ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧವಾಗಿ ಯಡಿಯೂರಪ್ಪ ಕರ್ನಾಟಕ ಬಂದ್ ಗೆ ಕರೆ ಕೊಟ್ಟಿದ್ದಾರೆ. ಬಂದ್ ಮೂಲಕ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ ಎಂದು ದೂರನಲ್ಲಿ ಉಲ್ಲೇಖಿಸಿದ್ದಾರೆ.
Advertisement