ಥಾಣೆ: 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೃತ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಮಹಾರಾಷ್ಟ್ರ ಥಾಣೆ (Maharashtra’s Thane) ಜಿಲ್ಲೆಯಲ್ಲಿ ನಡೆದಿದೆ.
ಸಂತ್ರಸ್ತ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ, ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯ ಸೆಕ್ಷನ್ 64(1)(ಅತ್ಯಾಚಾರ) ಅಡಿಯಲ್ಲಿ ಶನಿವಾರ (ಫೆ.15) ಪ್ರಕರಣ ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆದಾಗ್ಯೂ, ಎಫ್‌ಐಆರ್‌ನಲ್ಲಿ ಆರೋಪಿಯ ಸಾವಿನ ಸಮಯ ಮತ್ತು ಸಂದರ್ಭಗಳ ಬಗ್ಗೆ ವಿವರ ನೀಡಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ದೆಹಲಿ ರೈಲ್ವೆ ನಿಲ್ದಾಣಗಳಲ್ಲಿ ಜನಸಂದಣಿ, ಬಿಕ್ಕಟ್ಟು ನಿರ್ವಹಣೆಗಾಗಿ ಎಐ ತಂತ್ರಜ್ಞಾನ ಬಳಕೆ
ಆರೋಪಿಯು ಮುಂಬ್ರಾದ ತನ್ನ ನೆರೆಹೊರೆಯ 17 ವರ್ಷದ ಬಾಲಕಿಯೊಂದಿಗೆ ಸ್ನೇಹ ಬೆಳೆಸಿಕೊಂಡಿದ್ದ. 2024ರ ಜೂನ್ ಮತ್ತು ಆಗಸ್ಟ್ ನಡುವೆ ಹಲವು ಬಾರಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದ. ಬಳಿಕ ಕುಟುಂಬಸ್ಥರ ವಿರೋಧದ ನಡುವೆಯೂ ಬಾಲಕಿಯನ್ನು ವಿವಾಹವಾಗಿದ್ದ. ಫೆ.14ರಂದು ಬಾಲಕಿ ಮಗುವಿಗೆ ಜನ್ಮ ನೀಡಿದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ಹಣ ಕೇಂದ್ರವೇ ಕಿತ್ತುಕೊಂಡು ಹೋಗುತ್ತೆ, ನಮಗೆಲ್ಲಿ ಹಣ ಉಳಿಯುತ್ತೆ? – ರಾಮಲಿಂಗಾ ರೆಡ್ಡಿ
ಸದ್ಯ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಈಜಲು ತೆರಳಿದ್ದ ಯುವಕ ಸುಳಿಗೆ ಸಿಲುಕಿ ಸಾವು – ಎರಡು ದಿನವಾದ್ರೂ ಪತ್ತೆಯಾಗದ ಮೃತದೇಹ