ಮಂಗಳೂರು: ಆಟೋ ರಿಕ್ಷಾ ಬಾಂಬ್ ಸ್ಪೋಟ (Auto Rikshaw Blast) ದಲ್ಲಿ ಕದ್ರಿ ದೇವಸ್ಥಾನ (Kadri Temple) ಟಾರ್ಗೆಟ್ ವಿಚಾರ ಸಂಬಂಧ ಇದೀಗ ಕದ್ರಿ ದೇವಸ್ಥಾನದ ಕಾರ್ಯ ನಿರ್ವಾಹಣಾಧಿಕಾರಿಯು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Advertisement
ಸಾಮಾಜಿಕ ಜಾಲತಾಣ (Social Media) ದಲ್ಲಿ ಸಂದೇಶಗಳು ಹರಿದಾಡುತ್ತಿರುವುದು ಕಂಡುಬಂದಿದೆ. ಕದ್ರಿ ಮಂಜುನಾಥೇಶ್ವರ ದೇವಸ್ಥಾನಕ್ಕೆ ಪ್ರತಿದಿನ ಸಾವಿರಾರು ಭಕ್ತರು ಬರುತ್ತಿದ್ದಾರೆ. ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ (Islamic Resistance Council) ಕದ್ರಿ ದೇವಸ್ಥಾನದ ಮೇಲೆ ಬಾಂಬ್ ಬೆದರಿಕೆ ಹಾಕಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಿ. ಅಲ್ಲದೇ ದೇವಸ್ಥಾನಕ್ಕೆ ಸೂಕ್ತ ಭದ್ರತೆಯನ್ನು ಒದಗಿಸಬೇಕೆಂದು ಕಾರ್ಯ ನಿರ್ವಾಹಣಾಧಿಕಾರಿ ಜಯಮ್ಮ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟಕ್ಕೂ ಮುನ್ನ ದಿನ ಕರಾವಳಿಯಲ್ಲಿ ರಿಂಗಣಿಸಿದ್ದ ಸ್ಯಾಟಲೈಟ್ ಫೋನ್
Advertisement
Advertisement
ಸದ್ಯ ಜಯಮ್ಮ ದೂರನ್ನು ಕದ್ರಿ ಠಾಣೆ ಪೊಲೀಸರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಂಬ್ ಸ್ಫೋಟದ ಹೊಣೆ ಹೊತ್ತುಕೊಂಡ ಇಸ್ಲಾಮಿಕ್ ರೆಸಿಸ್ಟನ್ಸ್ ಕೌನ್ಸಿಲ್ ಉಗ್ರ ಸಂಘಟನೆಯ ಟಾರ್ಗೆಟ್ ಆಗಿದ್ದು ಕದ್ರಿ ದೇವಸ್ಥಾನ ಅಂತ ಪೋಸ್ಟ್ ಮಾಡಿತ್ತು. ಅರೇಬಿಕ್ ಭಾಷೆಯಲ್ಲಿ ಬರೆದುಕೊಂಡು ತಮ್ಮ ಟಾರ್ಗೆಟ್ ಕದ್ರಿ ದೇವಸ್ಥಾನ ಆಗಿತ್ತು ಎಂದು ಉಗ್ರರು ಹೇಳಿರುವುದರಿಂದ ಈ ದೂರು ನೀಡಲಾಗಿದೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ಮಾತ್ರವಲ್ಲ 6 ಸ್ಥಳಗಳು ಟಾರ್ಗೆಟ್ – ಮೊಬೈಲ್‌ನಲ್ಲಿ 6 ಜಾಗ ಸರ್ಚ್ ಮಾಡಿದ್ದ ಬಾಂಬರ್