ಉಡುಪಿ: ದೈವಕೋಲದ ವೇಳೆ ಸಭೆ ನಡೆಸಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ (Udupi Chikmagalur Lok Sabha constituency) ಕಾಂಗ್ರೆಸ್ (Congress) ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ (Jayaprakash Hegde) ವಿರುದ್ಧ ಕೇಸ್ ದಾಖಲಾಗಿದೆ.
ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿದ್ದ ಜಯಪ್ರಕಾಶ್ ಹೆಗ್ಡೆ, ಸಾರ್ವಜನಿಕರೊಂದಿಗೆ ಚುನಾವಣಾ ಸಭೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕಾಪು ಫ್ಲೈಯಿಂಗ್ ಸ್ಕಾಡ್‍ಗೆ ಮಾಹಿತಿ ಬಂದಿತ್ತು. ಧಾರ್ಮಿಕ ಸ್ಥಳದಲ್ಲಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರ ಮೇಲೆ ಪ್ರಭಾವ ಬೀರಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ. ಇದನ್ನೂ ಓದಿ: ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ
Advertisement
ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ನೀತಿ ಸಂಹಿತೆ (Model code of conduct) ಉಲ್ಲಂಘನೆ ಪ್ರಕರಣ ದಾಖಲಾಗಿದೆ.
Advertisement
Advertisement
ಬಿಜೆಪಿ ಭದ್ರಕೋಟೆ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. 2002ರಲ್ಲಿ ಡಿಲಿಮಿಟೇಶನ್ ಕಮಿಷನ್ ಆಫ್ ಇಂಡಿಯಾದ ಶಿಫಾರಸಿನ ಆಧಾರದ ಮೇಲೆ 2008 ರಲ್ಲಿ ಈ ಕ್ಷೇತ್ರ ರಚನೆಯಾಯಿತು. 2009ರಲ್ಲಿ ಕ್ಷೇತ್ರದಲ್ಲಿ ಮೊದಲ ಚುನಾವಣೆ ನಡೆಯಿತು. ಅದರ ಮೊದಲ ಸದಸ್ಯರಾಗಿ ಬಿಜೆಪಿಯ ಡಿ.ವಿ.ಸದಾನಂದ ಗೌಡ ಆಯ್ಕೆಯಾಗಿ ಸಂಸತ್ ಪ್ರವೇಶಿಸಿದರು. ಬಳಿಕ 2014 ಮತ್ತು 2019ರಲ್ಲಿ ಅಖಾಡಕ್ಕಿಳಿದಿದ್ದ ಶೋಭಾ ಕರಂದ್ಲಾಜೆ ಮೋದಿ ಹೆಸರಲ್ಲಿ ಪ್ರಚಂಡ ಬಹುಮತದಿಂದ ಗೆದ್ದು ಬೀಗಿದ್ದರು.
Advertisement
ಈ ಬಾರಿ ಬಿಜೆಪಿಯಿಂದ ಕೋಟಾ ಶ್ರೀನಿವಾಸ್ ಪೂಜಾರಿ (Kota Srinivas Poojary) ಕಣಕ್ಕಿಳಿದಿದ್ದು, ಕಾಂಗ್ರೆಸ್‍ನಿಂದ ಜಯಪ್ರಕಾಶ್ ಹೆಗ್ಡೆಯವರಿಗೆ ಟಿಕೆಟ್ ನೀಡಲಾಗಿದೆ. ಇದನ್ನೂ ಓದಿ: ಪಕ್ಷ ಸೇರುವಂತೆ ಬಿವೈವಿ ಆಹ್ವಾನ – ಬೆಂಬಲಿಗರ ಜೊತೆ ಚರ್ಚಿಸಿ ನಿರ್ಧಾರ ಎಂದ ಸುಮಲತಾ