ಬಳ್ಳಾರಿ: ಸಚಿವ ಆನಂದ್ ಸಿಂಗ್ ವಿರುದ್ಧ ಹೊಸಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಟುಂಬಕ್ಕೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಸೇರಿದಂತೆ ಮಾರೆಪ್ಪಾ ಹಾಗೂ ಹಣಮಂತಪ್ಪ ವಿರುದ್ಧ ಐಪಿಸಿ -504 (ಶಾಂತಿ ಭಂಗ), 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Advertisement
Advertisement
ಏನಿದು ಕಿರುಕುಳ..?: ಹೊಸಪೇಟೆ ನಗರದ ಹಂಪಿ ರಸ್ತೆಯಲ್ಲಿರುವ 6ನೇ ವಾರ್ಡಿನಲ್ಲಿರುವ ಸುಣ್ಣದ ಬಟ್ಟೆ ಪ್ರದೇಶದಲ್ಲಿ ಪೊಲಯ್ಯ ಎಂಬ ಕುಟುಂಬ ಹಲವು ವರ್ಷಗಳಿಂದ ವಾಸವಿದೆ. ಆದರೆ ಇತ್ತೀಚೆಗೆ ಅಲ್ಲಿಗೆ ಭೇಟಿ ನೀಡಿದ ಸಚಿವರು, ನೀವು ಕಟ್ಟಿರುವ ಮನೆ ಅಕ್ರಮವಾಗಿದೆ. ಇದು ಸರ್ಕಾರಿ ಜಾಗ ಈ ಜಾಗವನ್ನ ನಗರಸಭೆ ವಶಕ್ಕೆ ಪಡೆಯುತ್ತಿದ್ದು, ಈ ಕೂಡಲೇ ಮನೆ ಖಾಲಿ ಮಾಡುವಂತೆ ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾದಲ್ಲಿ ಬೆಳ್ಳಂಬೆಳಗ್ಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ
Advertisement
Advertisement
ಆನಂದ್ ಸಿಂಗ್ ಹೇಳಿಕೆಯಿಂದ ಮನನೊಂದ ಕುಟುಂಬ ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದೆ. ಈ ಹಿಂದೆ ಆನಂದ್ ಸಿಂಗ್ ಜಾಗ ಒತ್ತವರಿ ಮಾಡಿಕೊಂಡು ಮನೆ ನಿರ್ಮಾಣ ಮಾಡಿದ್ದಾರೆ ಎಂದು ಪೊಲಯ್ಯ ಆರೋಪ ಮಾಡಿದ್ದರು. ಅಲ್ಲದೆ ಇದಕ್ಕೆ ಸಂಬಂಧಪಟ್ಟಂತೆ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದ್ದರು. ದಾಖಲೆ ಬಿಡುಗಡೆ ಮಾಡಿದಾಗಿನಿಂದ ಆನಂದ್ ಸಿಂಗ್ ಅವರು ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲಯ್ಯ ಕುಟುಂಬ ಗಂಭೀರ ಆರೋಪ ಮಾಡಿದೆ.
ಸಚಿವರ ವಿರುದ್ಧ ಆರೋಪ ಮಾಡುತ್ತಿರುವ ಕುಟುಂಬ, ವಿಜಯನಗರ ಎಸ್‍ಪಿ ಕಚೇರಿ ಮುಂದೆ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದೆ. ಈ ವೇಳೆ ಸ್ಥಳದಲ್ಲೇ ಇದ್ದ ಪೊಲೀಸರು ಕುಟುಂಬವನ್ನು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಕುಟುಂಬದ ಸದಸ್ಯರನ್ನ ಹೊಸಪೇಟೆ ಸರ್ಕಾರಿ ನೂರು ಹಾಸಿಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.