ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಮುಖಂಡ ಅನಿಲ್ ಲಾಡ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ರಾಜ್ಯ ಬಿಜೆಪಿ ನಾಯಕರು ದೂರು ದಾಖಲಿಸಿದ್ದಾರೆ.
ಇತ್ತೀಚೆಗೆ ಮಾಜಿ ರಾಜ್ಯಸಭಾ ಸದಸ್ಯ ಅನಿಲ್ ಲಾಡ್, ಸಂವಿಧಾನ ರಚನೆ ಮಾಡಿದ್ದು ಇಂದಿರಾ ಗಾಂಧಿ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಎಂದು ಹೇಳಿದ್ದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದಲ್ಲದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೆಲವು ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿಗೆ ಹೋಗಿದ್ದಾರೆ ಎಂದು ಹೇಳಿಕೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮತ್ತು ಅನಿಲ್ ಲಾಡ್ ವಿರುದ್ಧ ಬಿಜೆಪಿ ನಾಯಕರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವಥ್ ನಾರಾಯಣ್ ಮತ್ತು ಬಿಜೆಪಿ ಎಸ್.ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.