ಚಾಮರಾಜನಗರ: ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಅರಣ್ಯ ಇಲಾಖೆಯ ಅನುಮತಿ ಪಡೆಯದೆ ಕಟಾವು ಮಾಡಿ, ಮಾರಾಟ ಮಾಡಲು ಮುಂದಾಗಿದ್ದ ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ ಗ್ರಾಮದ ಮಾಲೀಕನ ವಿರುದ್ಧ ದೂರು ದಾಖಲಾಗಿದೆ.
ಸತ್ತೇಗಾಲದ ಅಗ್ರಹಾರದ ಸಮೀಪವಿರುವ ಜಮೀನೊಂದರಲ್ಲಿ ಬೆಳೆದಿದ್ದ ತೇಗದ ಮರಗಳನ್ನು ಜಮೀನು ಮಾಲೀಕ ಸಚಿನ್ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಕಟಾವು ಮಾಡಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದರು. ಇದನ್ನೂ ಓದಿ: ಜಮ್ಮು ಕಾಶ್ಮೀರ ಅಭಿವೃದ್ಧಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಅಮಿತ್ ಶಾ
Advertisement
Advertisement
ಈ ಬಗ್ಗೆ ಪ್ರತಿಕ್ರಿಯಿಸಿದ ಮಲೆ ಮಹದೇಶ್ವರ ವನ್ಯ ಜೀವಿಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಏಡುಕೊಂಡಲು, ಸಚಿನ್ ಎಂಬುವರ ಜಮೀನಿನಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಡಿಯಲಾಗಿದೆ ಎಂಬ ಮಾಹಿತಿ ತಿಳಿದು ಬಂದಿತ್ತು. ಈ ಸಂಬಂಧ ಅರಣ್ಯಾಧಿಕಾರಿ ಸಿದ್ದಪ್ಪ ಹಾಗೂ ಗಾರ್ಡ್ ಪ್ರಮೋದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಸಿದಾಗ ತೇಗದ ಮರ ಕಟಾವು ಮಾಡಿರುವುದು ತಿಳಿದು ಬಂದಿದೆ. ಸದ್ಯ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.