ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು

Public TV
1 Min Read
Tejasvi Surya

ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ಹಲಸೂರು ಗೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ನಗರ್ತ್‌ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದ ತೇಜಸ್ವಿ ಸೂರ್ಯ ವಿರುದ್ಧ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲಾಗಿದೆ. ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ಪ್ರತಿಭಟನೆ ನಡೆಸಿದ್ದರು. ತೇಜಸ್ವಿ ಸೂರ್ಯ ಎಕ್ಸ್‌ ಖಾತೆಯಲ್ಲಿ ಹಾಕಿದ್ದ ಪೋಸ್ಟ್‌ಗಳನ್ನ ದಾಖಲಾತಿಯಾಗಿ ಇಟ್ಟಿಕೊಂಡು ಪೊಲೀಸರಿಗೆ ದೂರು ನೀಡಲಾಗಿತ್ತು. ಇದನ್ನೂ ಓದಿ: ನನಗೆ ಟಿಕೆಟ್ ನೀಡಿದರೆ ಹೈಕಮಾಂಡ್‌ಗೆ ತಲೆಬಾಗಿ ಸ್ಪರ್ಧೆ: ಮೃಣಾಲ್ ಹೆಬ್ಬಾಳ್ಕರ್

ನಗರ್ತ್ ಪೇಟೆ ಘಟನೆಯ ವರದಿಯನ್ನು ತುಷಾರ್ ಗಿರಿನಾಥ್ ಇಂದು ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಿದ್ದರು. ವರದಿ ಸಲ್ಲಿಸಿದ ಬಳಿಕ ರಾಜ್ಯ ಚುನಾವಣಾ ಆಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಗೆ ದೂರು ದಾಖಲು ಮಾಡಲು ಸೂಚನೆ ನೀಡಲಾಗಿದೆ. ಸೂಚನೆ ಸಿಕ್ಕ ಬಳಿಕ ಚಿಕ್ಕಪೇಟೆ ಚುನಾವಣಾಧಿಕಾರಿ ದೂರು ಕೊಟ್ಟಿದ್ದಾರೆ.

Share This Article