ವಿಜಯಪುರ: ಬಿಜೆಪಿ (BJP) ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿದ್ದ ಸಮರ್ಥ ಪಾಟೀಲ್ ವಿರುದ್ಧ ಗಾಂಧಿ ಚೌಕ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಜಿಲ್ಲೆಯ ಬಬಲೇಶ್ವರ (Babaleshwar) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜಯಕುಮಾರ್ ಪಾಟೀಲ್ ಅವರಿಗೆ ಟಿಕೆಟ್ ಘೋಷಣೆ ಮಾಡಿದ ದಿನ ಅವರ ಪುತ್ರ ಸಮರ್ಥ ಪಾಟೀಲ್ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಈ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಜು ಆಲಗೂರ ಆರೋಪಿಸಿದ್ದರು. ಇದರ ವಿಸ್ತೃತ ವರದಿಯನ್ನು ‘ಪಬ್ಲಿಕ್ ಟಿವಿ’ ಬಿತ್ತರಿಸಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸ್ ಇಲಾಖೆ ಸಮರ್ಥ ವಿರುದ್ಧ ಪ್ರಕರಣ ದಾಖಲಿಸಿದೆ. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ
ಘಟನೆಯ ವಿರುದ್ಧ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿದ್ದರು. ಗುಂಡು ಹಾರಿಸುವುದು ಸರಿಯಾದ ವರ್ತನೆಯಲ್ಲ ಎಂಬ ಆರೋಪವನ್ನು ಕಾಂಗ್ರೆಸ್ (Congress) ಮುಖಂಡರು ಮಾಡಿದ್ದರು. ಅಲ್ಲದೇ ಬಿಜೆಪಿ ಅಭ್ಯರ್ಥಿಯ ಪುತ್ರನ ಮೇಲೆ ಕೇಸ್ ದಾಖಲಿಸುವಂತೆ ಸಭೆಯಲ್ಲಿ ಸರ್ಕಾರವನ್ನು ಒತ್ತಾಯಿಸಿದ್ದರು.
ಸಮರ್ಥ ಪಾಟೀಲ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ (Arms Act) ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: 12 ವರ್ಷಗಳ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕ್ ವಿದೇಶಾಂಗ ಸಚಿವ