ಬೆಂಗಳೂರು: ಉತ್ತರಾಖಂಡದಲ್ಲಿ (Uttarakhand) ಕನ್ನಡಿಗ ಪ್ರವಾಸಿಗರು ನಾಪತ್ತೆ ಪ್ರಕರಣ ಸಂಬಂಧ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಉತ್ತರಾಖಂಡದ ಉತ್ತರಕಾಶಿಯ ಸಹಸ್ತ್ರ ತಾಲ್‌ಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕರ್ನಾಟಕದ 18 ಮಂದಿ ಪ್ರವಾಸಿಗರು ಸೇರಿ 22 ಜನ ನಾಪತ್ತೆಯಾಗಿರುವ ಸುದ್ದಿ ವರದಿಯಾಗಿದೆ. ಪ್ರತಿಕೂಲ ವಾತಾವರಣದಿಂದ ದಿಕ್ಕು ತಪ್ಪಿರಬಹುದಾದ ಸಾಹಸಿ ಚಾರಣಿಗರು ಸುರಕ್ಷಿತವಾಗಿ ವಾಪಸ್ ಬರುವಂತಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.
ಈ ನಿಟ್ಟಿನಲ್ಲಿ ಅವರನ್ನು ಪತ್ತೆ ಹಚ್ಚಲು ನಡೆಯುತ್ತಿರುವ ಕಾರ್ಯಾಚರಣೆ ಯಶಸ್ವಿಯಾಗುವಂತೆ ಹಾಗೂ ಕರ್ನಾಟಕ ಸರ್ಕಾರ ಉತ್ತರಾಖಂಡ ಸರ್ಕಾರದೊಂದಿಗೆ ಈ ಕೂಡಲೇ ಸಂಪರ್ಕ ಬೆಳೆಸಿ 18 ಕನ್ನಡಿಗ ಪ್ರವಾಸಿಗರೂ ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿ ಬರುವಂತಾಗಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಿ ಎಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಗ್ಯಾರಂಟಿ ಪರ ಜನ ನಿಂತಿಲ್ಲ ಅನ್ನಿಸುತ್ತೆ.. ಗ್ಯಾರಂಟಿಗಳಿಗೆ ಹಿನ್ನಡೆಯಾಗಿದೆ: ಸಚಿವ ಚಲುವರಾಯಸ್ವಾಮಿ
ಕನ್ನಡಿಗರು ಸೇರಿ 9 ಮಂದಿ ಸಾವು: ಉತ್ತರಾಖಂಡದಲ್ಲಿ (Uttarakhand) ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ (Karnataka) ನಾಲ್ವರು ಸೇರಿ 9 ಮಂದಿ ಚಾರಣಿಗರು ಮೃತಪಟ್ಟಿದ್ದಾರೆ. ಮೇ 29ರಿಂದ ಜೂನ್ 7ರವರೆಗೆ ಭಟವಾಡಿ ಮಲ್ಲಾ – ಸಿಲ್ಲಾ – ಕುಶಕಲ್ಯಾಣ – ಸಹಸ್ತ್ರತಾಲ್ ಟ್ರೆಕ್ಕಿಂಗ್‌ಗೆ (Trekking) ಅನುಮತಿ ಪಡೆದಿದ್ದರು.
9 ಚಾರಣಿಗರು ಮೃತಪಟ್ಟಿದ್ದನ್ನು ಉತ್ತರಕಾಶಿ ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರದ ಅಧಿಕಾರಿ ದೇವೇಂದ್ರ ಪಟವಾಲ್ ಖಚಿತ ಪಡಿಸಿದ್ದಾರೆ.
ಮೃತರನ್ನು ಬೆಂಗಳೂರಿನ ಸುಜಾತ (52), ಪದ್ಮಿನಿ ಹೆಗಡೆ (35), ಚಿತ್ರಾ (48), ಸಿಂಧು (45), ವೆಂಕಟೇಶ್ ಪ್ರಸಾದ್ (52), ಅನಿತಾ (61), ಆಶಾ ಸುಧಾಕರ (72), ಪದ್ಮನಾಭನ್ ಕೆಪಿಎಸ್ (50) ವಿನಾಯಕ್ ಎಂದು ಗುರುತಿಸಲಾಗಿದೆ.