ಚಿಕ್ಕೋಡಿ: ಸ್ಥಳೀಯ ಖಾಸಗಿ ಶಿಕ್ಷಣ ಸಂಸ್ಥೆಯ (Private Educational Institution) ಪ್ರೌಢ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಶಿಕ್ಷಕನೊಬ್ಬ (Teacher) ಅಸಭ್ಯವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದ್ದು, ಕಾಮುಕ ಶಿಕ್ಷಕನ ವಿರುದ್ಧ ಕೇಸ್ ದಾಖಲಾಗಿದೆ.
ಪಟ್ಟಣದ ಖಾಸಗಿ ಪ್ರೌಢ ಶಾಲೆಯ ಕನ್ನಡ ಮಾಧ್ಯಮದ ಶಿಕ್ಷಕ ಬಿ.ಆರ್. ಬಾಡಕರ 10ನೇ ತರಗತಿಯ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ವಿದ್ಯಾರ್ಥಿನಿ ಡಿ.23 ರಂದು ಶಿಕ್ಷಕನ ವಿರುದ್ಧ ದೂರು ನೀಡಿದ್ದಾಳೆ. ಇದನ್ನೂ ಓದಿ: ಹಾಸನ ಜೆಡಿಎಸ್ ಕಾರ್ಯಕರ್ತರಿಗೆ ಮೈಸೂರಿನಲ್ಲಿ ಭರ್ಜರಿ ಬಾಡೂಟ
ಅಲ್ಲದೇ ಕಾಮುಕ ಶಿಕ್ಷಕ ಬಾಡಕರ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯವನ್ನೂ ನಡೆಸಿದ್ದಾನೆ. ಈ ವಿಷಯ ಯಾರಿಗಾದ್ರೂ ಹೇಳಿದ್ರೆ ಇಂಟರ್‌ನಲ್ ಅಂಕಗಳನ್ನ ಕಡಿತಗೊಳಿಸೋದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಶಿಕ್ಷಕನ ಈ ಕೃತ್ಯಕ್ಕೆ ಸಹಕರಿಸಿದ ಮತ್ತೊಬ್ಬ ಶಿಕ್ಷಕ ಕೆ.ಎಂ ಕೋಳಿ ವಿರುದ್ಧವೂ ದೂರು ನೀಡಲಾಗಿತ್ತು. ಇದನ್ನೂ ಓದಿ: ವಿದ್ಯಾರ್ಥಿನಿಯರು ಹಾಜರಾಗದಿದ್ರೆ ನಮಗೂ ಉನ್ನತ ಶಿಕ್ಷಣ ಬೇಡ – ತಾಲಿಬಾನ್‌ಗೆ ವಿದ್ಯಾರ್ಥಿಗಳಿಂದ ಎಚ್ಚರಿಕೆ
ಈ ಹಿನ್ನೆಲೆಯಲ್ಲಿ ಆರೋಪಿಗಳ (Accused) ವಿರುದ್ಧ ಸಂಕೇಶ್ವರ ಪೋಲಿಸ್ ಠಾಣೆಯಲ್ಲಿ (Police Station) ಐಪಿಸಿ (IPC) ಸೆಕ್ಷನ್ 354 (A), 109, 506 ಅಡಿಯಲ್ಲಿ, ಪೋಕ್ಸೋ (POCSO Act) ಹಾಗೂ ಎಸ್ಸಿ-ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ-2015ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿದೆ.