ಬೆಂಗಳೂರು: ಆಪರೇಷನ್ ಸಿಂಧೂರದ (Operation Sindoor) ಬಗ್ಗೆ, ಸೇನೆಯ ಯುದ್ಧದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಕೋಲಾರ ಶಾಸಕ ಕೊತ್ತೂರು ಮಂಜುನಾಥ್ (Kottur Manjunath) ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ (Banshankari Police Station) ಪ್ರಕರಣ ದಾಖಲಾಗಿದೆ.
ಬೆಂಗಳೂರು ನಾಗರಿಕ ಹೋರಾಟ ಸಮಿತಿಯ ಉಪಾಧ್ಯಕ್ಷ ಗಣೇಶ್ ರಾವ್ ಅವರು ಕೊತ್ತೂರು ಮಂಜುನಾಥ್ ವಿರುದ್ಧ ದೂರು ದಾಖಲಿಸಿದ್ದು, ಕ್ರಮಕ್ಕಾಗಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಫ್ಯಾಂಟಸಿ ಕ್ರಿಕೆಟ್‌ನಲ್ಲಿ ಗೆದ್ದ ಅಭಿಮಾನಿಗೆ ಲ್ಯಾಂಬೊರ್ಗಿನಿ ಕಾರು ಗಿಫ್ಟ್ ಕೊಟ್ಟ ರೋಹಿತ್ ಶರ್ಮಾ
ದೂರಿನಲ್ಲಿ ಏನಿದೆ?
ಏ.22ರಂದು ಕಾಶ್ಮೀರದ ಪಹಲ್ಗಾಮ್‌ನಲ್ಲಿ (Pahalgam Attack) 26 ನಾಗರಿಕರನ್ನು ಅವರ ಕುಟುಂಬದವರ ಸಮ್ಮುಖದಲ್ಲೇ ಪಾಕ್ ಭಯೋತ್ಪಾದಕರು ಹತ್ಯೆ ಮಾಡಿದರು. ಇದಕ್ಕೆ ಪ್ರತೀಕಾರವಾಗಿ ಭಾರತ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನು ಮತ್ತು 8 ವಾಯುನೆಲೆಗಳನ್ನು ನಾಶ ಮಾಡಿದ್ದರು.
ಪಾಕಿಸ್ತಾನಕ್ಕೆ ಸೇರಿದ 16 ಯುದ್ಧ ವಿಮಾನ, ಚೀನಾದ ಕ್ಷಿಪಣಿಗಳು, ಡ್ರೋನ್‌ಗಳನ್ನು ನಾಶ ಮಾಡಿದ ಭಾರತೀಯ ಸೇನೆಯ ಪರಾಕ್ರಮಕ್ಕೆ ಇಡೀ ವಿಶ್ವದಾದ್ಯಂತ ಪ್ರಶಂಸೆ ವ್ಯಕ್ತವಾಗುತ್ತಿದೆ. ಆದರೆ ಈ ಸಮಯದಲ್ಲಿ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಮೇ 16 ರಂದು ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಭಾರತೀಯ ಸೇನೆ 4 ವಿಮಾನಗಳನ್ನು ಅತ್ತಿಂದ ಇತ್ತ, ಇತ್ತಿಂದ ಅತ್ತ ಹಾರಾಡಿಸಿ ಬಡಾಯಿಕೊಚ್ಚಿಕೊಳ್ಳುತ್ತಿದೆ. ಪಾಕಿಸ್ತಾನದ ಮೇಲೆ ಭಾರತೀಯ ಸೇನೆ ನಡೆಸಿರುವ ದಾಳಿಗೆ ಸಾಕ್ಷ್ಯಗಳೇನು ? ಎಂಬ ಹೇಳಿಕೆ ನೀಡುವ ಮೂಲಕ ಭಾರತ ದೇಶಕ್ಕೆ ಮತ್ತು ಭಾರತೀಯ ಸೇನೆಗೆ ಕಳಂಕ ಹಚ್ಚುವ ಮಾತುಗಳನ್ನಾಡಿದ್ದರು.
ತಮ್ಮ ಮಾತುಗಳ ಮೂಲಕ 140 ಕೋಟಿ ಭಾರತೀಯರ ಭಾವನೆಗಳಿಗೆ ದಕ್ಕೆ ತಂದಿರುವ ಹಾಗೂ ಬಹಿರಂಗವಾಗಿ ಭಾರತ ದೇಶ ಮತ್ತು ಭಾರತೀಯ ಸೇನೆಗೆ ಅವಮಾನಕರ ಮಾತುಗಳನ್ನಾಡಿದ್ದಾರೆ. ಹೀಗಾಗಿ ಶಾಸಕ ಕೊತ್ತೂರು ಮಂಜುನಾಥ್ ಅವರ ವಿರುದ್ಧ ಕೂಡಲೇ ದೇಶದ್ರೋಹದ ಪ್ರಕರಣ ಮತ್ತು ಕ್ರಿಮಿನಲ್ ಪ್ರಕರಣವನ್ನು ದಾಖಲಿಸಬೇಕು. ಇದಕ್ಕೆ ಸಂಬಂಧಿಸಿದಂತೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ದಾಖಲೆಗಳ ಸಹಿತ ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಇದನ್ನೂ ಓದಿ:ಕಲಬುರಗಿಯಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ – ಮನೆ ಕುಸಿತ