ವಿಜಯಪುರ: ಈದ್‌ಮಿಲಾದ್ (Eid Milad) ಮೆರವಣಿಗೆ ವೇಳೆ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ ಎಂಬ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಕೇಸ್ (Suo Moto Case) ದಾಖಲಿಸಿಕೊಂಡಿದ್ದಾರೆ.
ವಿಜಯಪುರ (Vijayapura) ನಗರದಲ್ಲಿ ಸೆ.5 ರಂದು ಈದ್‌ಮಿಲಾದ್ ಹಬ್ಬದ ಪ್ರಯುಕ್ತ ಮೆರವಣಿಗೆ ನಡೆದಿತ್ತು. ಈ ಮೆರವಣಿಗೆಯಲ್ಲಿ 15 ನಿಮಿಷ ಪೊಲೀಸರನ್ನ ಸುಮ್ಮನಿರಿಸಿ (15 ಮಿನಿಟ್ ಕೆಲಿಯೆ ಪೊಲೀಸಕೋ ಹಠಾಲೋ) ಎಂಬ ಹಾಡನ್ನು ಪ್ರಸಾರ ಮಾಡಲಾಗಿತ್ತು. ಇದೀಗ ಪೊಲೀಸರು ಈ ಹಾಡನ್ನು ಪ್ರಸಾರ ಮಾಡಿದ ಮೂವರ ವಿರುದ್ಧ ಕೇಸ್ ದಾಖಲಿಸಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಗಣೇಶನ ಮೇಲೆ ಕಲ್ಲು ತೂರಲು ಪ್ರಚೋದನೆ ಏನು? – ಇಲ್ಲಿದೆ ಇನ್‌ಸೈಡ್ ಸ್ಟೋರಿ
ಈ ಹಾಡು ಪ್ರಸಾರ ಮಾಡಿದ ಡಿಜೆ ವಾಹನದ ಮಾಲೀಕ, ಡಿಜೆ ಆಪರೇಟರ್, ಹಾಗೂ ಇದನ್ನ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ ಎಂ.ಟಿ ತೌಸಿಫ್ ವಿರುದ್ಧ ಪ್ರಕರಣ ದಾಖಲಾಗಿದೆ.
ಗಾಂಧಿಚೌಕ್ ಪೊಲೀಸ್ (Gandhi Chowk Police) ಠಾಣೆಯಲ್ಲಿ ಸಾಮಾಜಿಕ ಜಾಲತಾಣ ನಿರ್ವಹಣೆ ಮಾಡುತ್ತಿರುವ ಜಿ.ಕೆ ದೇವಕರ್ ಅವರು ಮೂವರ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿದ್ದಾರೆ.