ಮಹೇಶ್‌ ಶೆಟ್ಟಿ ತಿಮರೋಡಿ, ಮಟ್ಟಣ್ಣನವರ್, ಪುನೀತ್‌ ಕೆರೆಹಳ್ಳಿ ವಿರುದ್ಧ ಎಫ್‌ಐಆರ್‌ ದಾಖಲು

Cases Filed Against Girish Mattennavar Mahesh Shetty Thimarodiand Puneeth Kerehalli for Provocative Online Statements belthangady police station

ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್‌ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿದೆ. ಗಿರೀಶ್ ಮಟ್ಟಣ್ಣವರ್ (Girish Mattannavar) ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿದ್ದಾರೆ.  ಇದನ್ನೂ ಓದಿ: ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ ಓರ್ವ ಆರೋಪಿ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರು ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಚರಣ್‌ ಶೆಟ್ಟಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಗಿರೀಶ್ಮಟ್ಟಣನವರ್‌, ಮಹೇಶ್ಶೆಟ್ಟಿ ತಿಮರೋಡಿ, ಸಮೀರ್ವಿರುದ್ಧ ಎಫ್‌ಐಆರ್ದಾಖಲು

ಪುನೀತ್‌ ಕೆರೆಹಳ್ಳಿ (Puneeth Kerehalli) ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರ ದೂರಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.