ChitradurgaCrimeDistrictsKarnatakaLatestLeading NewsMain Post
ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲು

ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ಅಟ್ರಾಸಿಟಿ ದೂರು ದಾಖಲಾಗಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ನಿಗ್ರಹ ಕಾಯ್ದೆಯ ಅಡಿ ದೂರು ದಾಖಲಾಗಿದೆ. ಅಟ್ರಾಸಿಟಿ ಕೇಸ್ ದಾಖಲು ಮಾಡಲು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದಿದ್ದರು. ಇದನ್ನೂ ಓದಿ: ಮುರುಘಾ ಕೇಸ್ – ಮಠಕ್ಕೆ ಕರೆದೊಯ್ದು ಸ್ಥಳ ಮಹಜರು
ನೊಂದ ಇಬ್ಬರ ಪೈಕಿ ಒಬ್ಬಳು ಪರಿಶಿಷ್ಟ ಜಾತಿಗೆ ಸೇರಿದವಳಾದ ಕಾರಣ ಈ ಕಾಯ್ದೆಯ ಅಡಿ ಈಗ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಠಕ್ಕೆ ಮುರುಘಾ ಶ್ರೀಗಳು ವಾಪಸ್- ಶಾಂತಿ, ಸಹನೆಯಿಂದ ಇರುವಂತೆ ಮನವಿ
ಈಗಾಗಲೇ ಇಬ್ಬರು ಅಪ್ರಾಪ್ತ ಬಾಲಕಿಯರು ನೀಡಿದ ದೂರಿನ ಮೇರೆ ಶ್ರೀಳ ವಿರುದ್ಧ ಅತ್ಯಾಚಾರ, ಪೋಕ್ಸೋ ಕಾಯ್ದೆಯ ಅಡಿ ಕೇಸ್ ದಾಖಲಾಗಿದೆ.