ಕೋಲ್ಕತ್ತಾ: ತನ್ನ ಮನೆಯಲ್ಲಿ ಪತ್ತೆಯಾದ ಭಾರೀ ಮೊತ್ತದ ನಗದು ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿಗೆ ಸೇರಿದ್ದು ಎಂದು ಸಚಿವರ ಆಪ್ತೆಯೇ ಆಗಿರುವ ಅರ್ಪಿತಾ ಮುಖರ್ಜಿ ಜಾರಿ ನಿರ್ದೇಶನಾಲಯಕ್ಕೆ(ಇಡಿ) ತಿಳಿಸಿದ್ದಾರೆ.
ಇತ್ತೀಚೆಗೆ ಇಡಿ ಶಿಕ್ಷಕರ ಅಕ್ರಮ ನೇಮಕಾತಿಯ ಆರೋಪದ ಅಡಿಯಲ್ಲಿ ಸಚಿವ ಪಾರ್ಥ ಚಟರ್ಜಿ ಹಾಗೂ ಅವರೊಂದಿಗೆ ಸಂಪರ್ಕದಲ್ಲಿರುವವರ ಮನೆಯಲ್ಲಿ ತನಿಖೆ ನಡೆಸಿತ್ತು. ಚಟರ್ಜಿಯವರ ಆಪ್ತೆ ಅರ್ಪಿತಾ ಮನೆಯಲ್ಲೂ ಇಡಿ ತನಿಖೆ ನಡೆಸಿ, ಸುಮಾರು 21 ಕೋಟಿ ರೂ. ಮೊತ್ತದ ಹಣವನ್ನು ಬಯಲಿಗೆ ತಂದಿತ್ತು. ಇದೀಗ ಅರ್ಪಿತಾ ಮುಖರ್ಜಿ ಈ ಹಣ ಚಟರ್ಜಿ ಅವರಿಗೆ ಸೇರಿದ್ದಾಗಿ ತಿಳಿಸಿದ್ದು, ಈ ಹಣವನ್ನು ತನಗೆ ಸಂಬಂಧಿಸಿದ ಕಂಪನಿಯಲ್ಲಿ ತುಂಬಿಸಬೇಕಾಗಿತ್ತು ಎಂಬ ಗುಟ್ಟನ್ನು ಬಿಟ್ಟುಕೊಟ್ಟಿದ್ದಾರೆ. ಇದನ್ನೂ ಓದಿ: ಮೋದಿ-ಯೋಗಿಗೆ ಕುಟುಂಬವಿಲ್ಲ, ಆದರೆ ನಮಗಿದೆ: ಉಮೇಶ್ ಕತ್ತಿ
Advertisement
Advertisement
ಅರ್ಪಿತಾ ವಿಚಾರಣೆಯ ಸಂದರ್ಭ ಇಡಿ ರೇಡ್‌ಗೂ ಮುನ್ನ 1-2 ದಿನಗಳಲ್ಲಿ ತನ್ನ ಮನೆಯಲ್ಲಿದ್ದ ಹಣದ ರಾಶಿಯನ್ನು ಸ್ಥಳಾಂತರಿಸುವ ಯೋಜನೆ ಮಾಡಿದ್ದಾಗಿ ಬಹಿರಂಗಪಡಿಸಿದ್ದಾರೆ. ಆದರೆ ಈ ಯೋಜನೆಯನ್ನು ಇಡಿ ವಿಫಲಗೊಳಿಸಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿಂದು 939 ಮಂದಿ ಕೊರೊನಾ ಸೋಂಕು – ಓರ್ವ ಸಾವು