ಜೈಪುರ: ರಾಜಸ್ಥಾನದ (Rajasthan) ಜೈಪುರದಲ್ಲಿರುವ (Jaipur) ಸರ್ಕಾರಿ ಕಟ್ಟಡದ ಯೋಜನ ಭವನದ ನೆಲಮಾಳಿಗೆಯಲ್ಲಿ ಬೀಗ ಹಾಕಲಾಗಿದ್ದ ಕಪಾಟಿನಲ್ಲಿ 2.31 ಕೋಟಿ ರೂ.ಗೂ ಅಧಿಕ ನಗದು ಹಾಗೂ 1 ಕೆಜಿ ಚಿನ್ನ ಪತ್ತೆಯಾಗಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೆಲಮಾಳಿಗೆಗೆ (Basement) ಪ್ರವೇಶ ಹೊಂದಿರುವ ಯೋಜನಾ ಭವನದ ಏಳು ಉದ್ಯೋಗಿಗಳನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ. ಕಪಾಟಿನಲ್ಲಿ ಇರಿಸಲಾಗಿದ್ದ ಟ್ರಾಲಿ ಸೂಟ್‌ಕೇಸ್‌ನಲ್ಲಿ 2,000 ರೂ. ಹಾಗೂ 500 ರೂ. ಮುಖಬೆಲೆಯ ನೋಟುಗಳು ಪತ್ತೆಯಾಗಿದ್ದು, ಆರ್‌ಬಿಐ 2,000 ರೂ. ಕರೆನ್ಸಿ ಚಲಾವಣೆ ಹಿಂತೆಗೆದುಕೊಂಡ ದಿನ ಈ ಘಟನೆ ನಡೆದಿದೆ. ನಗದು ಹಾಗೂ ಚಿನ್ನವನ್ನು ವಶಪಡಿಸಿಕೊಂಡ ಪೊಲೀಸರು ಈ ಕುರಿತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಅವರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: MIG-21 ಫೈಟರ್ ಜೆಟ್ ಹಾರಾಟ ಬಂದ್ – IAF ಮಹತ್ವದ ನಿರ್ಧಾರ
Advertisement
Advertisement
ಮುಖ್ಯ ಕಾರ್ಯದರ್ಶಿ ಉಷಾ ಶರ್ಮಾ, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಉಮೇಶ್ ಮಿಶ್ರಾ, ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದಿನೇಶ್ ಎಂಎನ್ ಮತ್ತು ಜೈಪುರ ಕಮಿಷನರ್ ಆನಂದ ಶ್ರೀವಾಸ್ತವ ಅವರು ಶುಕ್ರವಾರ ತಡರಾತ್ರಿ ಸಚಿವಾಲಯದಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜೈಪುರ ಕಮೀಷನರ್ ಶ್ರೀವಾಸ್ತವ, ಕಪಾಟಿನಲ್ಲಿ ಅನೇಕ ಫೈಲ್‌ಗಳು ಮತ್ತು ಟ್ರಾಲಿ ಸೂಟ್‌ಕೇಸ್‌ನಲ್ಲಿ ಚಿನ್ನ ಮತ್ತು ನಗದು ತುಂಬಿದೆ ಎಂದು ಅಲ್ಲಿನ ನೌಕರರು ಅಶೋಕ್ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಆರ್ಥಿಕ ತಜ್ಞ ಮೋದಿಯವರೇ 500 ನೋಟು ಹಿಂಪಡೆಯುತ್ತೀರಾ?: ಓವೈಸಿ ಪ್ರಶ್ನೆ
Advertisement
ಇ-ಫೈಲಿಂಗ್ ಯೋಜನೆಯಡಿ ಕಡತಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣಗೊಳಿಸಲಾಗುತ್ತಿದೆ. ಅಲ್ಲದೇ ಬೀಗ ಹಾಕಿದ್ದ ಎರಡು ಕಪಾಟುಗಳ ಕೀಗಳು ಪತ್ತೆಯಾದ ನಂತರ ಅವುಗಳನ್ನು ತೆರೆಯಲಾಗಿದೆ. ಏಳು ಮಂದಿ ನೌಕರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದ್ದು, ಸಂಪೂರ್ಣ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿ ಸಂಪೂರ್ಣ ವಿಷಯವನ್ನು ಬಹಿರಂಗಪಡಿಸಲಾಗುವುದು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಪಾಕಿಸ್ತಾನದಿಂದ ಭಾರತಕ್ಕೆ ಡ್ರಗ್ಸ್ ಸಾಗಾಟ – ಎರಡು ಡ್ರೋನ್ ಹೊಡೆದುರುಳಿಸಿದ ಬಿಎಸ್‌ಎಫ್
Advertisement
ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡ ಕಪಾಟಿಗೆ ಹಲವು ತಿಂಗಳುಗಳಿಂದ ಬೀಗ ಹಾಕಲಾಗಿತ್ತು. ಆಧಾರ್-ಯುಐಡಿ-ಸಂಯೋಜಿತ ಸಿಬ್ಬಂದಿಯ ಸಹಾಯದಿಂದ ನೆಲಮಾಳಿಗೆಯನ್ನು ಪ್ರವೇಶಿಸಿದ ಪೊಲೀಸರು ನೆಲಮಾಳಿಗೆಗೆ ಪ್ರವೇಶವಿರುವ ಉದ್ಯೋಗಿಗಳನ್ನು ಈ ಕುರಿತು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್ ಬ್ಯಾನ್ ಮಾಡಿದ RBI
ಯಾರ ಹಣ? ಹೇಗೆ ಬಂತು ಎಂದು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ. ಈ ಘಟನೆಯ ಬಳಿಕ ಪ್ರತಿಪಕ್ಷವಾದ ಬಿಜೆಪಿ ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿದೆ. ವಿರೋಧ ಪಕ್ಷದ ನಾಯಕ ರಾಜೇಂದ್ರ ರಾಥೋಡ್, ಇದು ಗೆಹ್ಲೋಟ್ ಸರ್ಕಾರ ಭ್ರಷ್ಟಾಚಾರದ ರಕ್ಷಕ ಎಂಬುವುದಕ್ಕೆ ಸಾಕ್ಷಿಯಾಗಿದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಅಲ್ಲದೇ ಯೋಜನಾ ಭವನಕ್ಕೆ ಇಷ್ಟು ದೊಡ್ಡ ಮೊತ್ತದ ನಗದು ಮತ್ತು ಚಿನ್ನ ಹೇಗೆ ತಲುಪಿತು ಎಂಬುದನ್ನು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಷೇರು ವಿವಾದ; ಅದಾನಿ ಗ್ರೂಪ್‌ಗೆ ಸುಪ್ರೀಂ ಕೋರ್ಟ್ ಸಮಿತಿ ಕ್ಲೀನ್ ಚಿಟ್