ಜಾತಿ ಜನಗಣತಿ: ರಾಜ್ಯಸಭೆಯಲ್ಲಿ ಆರೋಪ ಪ್ರತ್ಯಾರೋಪ

Public TV
1 Min Read
Rajya Sabha

ನವದೆಹಲಿ: ರಾಜ್ಯದಲ್ಲಿ ಜಾತಿ ಗಣತಿ (Caste Census) ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಸಭೆಯಲ್ಲಿ ಬಿಸಿಬಿಸಿ ಚರ್ಚೆಯಾಗಿದ್ದು ಬಿಜೆಪಿ (BJP) ಕಾಂಗ್ರೆಸ್ (Congress) ನಡುವೆ ಆರೋಪ ಪ್ರತ್ಯಾರೋಪಕ್ಕೆ ವೇದಿಕೆಯಾಯಿತು. ಕರ್ನಾಟಕದ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಸಂಸದ ಸುಶೀಲ್ ಕುಮಾರ್ ಮೋದಿ ಜಾತಿ ಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar) ನಡುವೆ ಪರಸ್ಪರ ಭಿನ್ನಾಭಿಪ್ರಾಯಗಳು ವ್ಯಕ್ತವಾಗಿದೆ ಎಂದರು.

ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂಬಂಧಿಸಿದ ಎರಡು ವಿಧೇಯಕಗಳ ಮೇಲಿನ ಚರ್ಚೆಯ ಸಂದರ್ಭದಲ್ಲಿ ಸಂಸದ ಸುಶೀಲ್ ಕುಮಾರ್ ಮೋದಿ ಈ ವಿಚಾರವನ್ನು ಪ್ರಸ್ತಾಪಿಸಿದರು. ಕಾಂಗ್ರೆಸ್ ಜಾತಿ ಸಮೀಕ್ಷೆ ನಡೆಸುವ ಭರವಸೆ ನೀಡುತ್ತದೆ. ಆದರೆ ಕರ್ನಾಟಕದಲ್ಲಿ ಜಾತಿಗಣತಿ ಬಿಡುಗಡೆಗೆ ಅವರದ್ದೇ ಸರ್ಕಾರದ ಡಿಸಿಎಂ ಡಿಕೆಶಿಯ ವಿರೋಧ ಇದೆ ಎಂದು ಆರೋಪಿಸಿದರು. ಇದನ್ನೂ ಓದಿ: ರಾಜಸ್ಥಾನ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ

ಇದಕ್ಕೆ ಪ್ರತಿಕ್ರಿಯೆಯಾಗಿ ಎದ್ದು ನಿಂತು ಮಾತನಾಡಿದ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಾತಿ ಸಮೀಕ್ಷೆ ವಿಚಾರದಲ್ಲಿ ಎಲ್ಲ ಮೇಲ್ಜಾತಿಯವರು ಒಟ್ಟಾಗಿದ್ದಾರೆ ಎಂದು ತಿರುಗೇಟು ನೀಡಿದರು. ಜಾತಿ ಗಣತಿ ವಿಚಾರದಲ್ಲಿ ಡಿ.ಕೆ ಶಿವಕುಮಾರ್, ಬಿಜೆಪಿ ಒಂದೇ ಇದು ಜಾತಿಯ ಲಕ್ಷಣ ಮೇಲ್ಜಾತಿಯ ಜನರು ಆಂತರಿಕವಾಗಿ ಒಗ್ಗಟ್ಟಾಗುತ್ತಾರೆ ಎಂದು ಆಕ್ರೋಶ ಹೊರ ಹಾಕಿದರು. ಇದನ್ನೂ ಓದಿ: 30 ದಿನಗಳ ಒಳಗಡೆ ಮನೆ ಖಾಲಿ ಮಾಡಿ: ಮೊಯಿತ್ರಾಗೆ ನೋಟಿಸ್‌

ಖರ್ಗೆ ಮಾತಿಗೆ ವ್ಯಂಗ್ಯವಾಡಿದ ಸುಶೀಲ್ ಕುಮಾರ್ ಮೋದಿ, ಒಬಿಸಿ ಬಗ್ಗೆ ಕಾಂಗ್ರೆಸ್ ತೋರಿಸುವ ಪ್ರೀತಿ ಒಂದು ಪ್ರಹಸನವಾಗಿದೆ ನಿಮ್ಮ ಸರ್ಕಾರ ಜಾತಿ ಸಮೀಕ್ಷೆ ವರದಿಯನ್ನು ಯಾವಾಗ ಬಹಿರಂಗ ಪಡಿಸುತ್ತದೆ ಎಂಬುದನ್ನು ಖರ್ಗೆಯೇ ಹೇಳಬೇಕು ಎಂದು ಟಾಂಗ್ ನೀಡಿದರು. ಇದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧ್ವನಿಗೂಡಿಸಿದರು. ಇದನ್ನೂ ಓದಿ: ಕರ್ನಾಟಕದ ರೈತರಿಗೆ ಪ್ರಧಾನಿ ಮೋದಿ ವಿಶೇಷ ಪ್ಯಾಕೇಜ್ ಘೋಷಿಸಬೇಕು – ಸುಮಲತಾ ಮನವಿ

Share This Article