ನವದೆಹಲಿ: ಜನಗಣತಿಯ (Census) ಜೊತೆ ಜಾತಿ ಗಣತಿ (Caste Data) ನಡೆಸಲು ನರೇಂದ್ರ ಮೋದಿ (Narendra Modi)ನೇತೃತ್ವದ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.
ಬಿಜೆಪಿ ಜಾತಿಗಣತಿಯನ್ನು ವಿರೋಧಿಸುತ್ತಿದೆ ಎಂದು ಕಾಂಗ್ರೆಸ್ ಆರೋಪದ ಬೆನ್ನಲ್ಲೇ ಕೇಂದ್ರ ಸರ್ಕಾರ ದೇಶಾದ್ಯಂತ ಜಾತಿ ಗಣತಿ ನಡೆಸುವುದಾಗಿ ಹೇಳಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ (CCPA) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೇ ಖಾತೆಯ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದರು. ಇದನ್ನೂ ಓದಿ: ನಿಗದಿಯಾಗಿದ್ದ ಮೋದಿ ರಷ್ಯಾ ಪ್ರವಾಸ ದಿಢೀರ್ ರದ್ದು!
#WATCH | Delhi | “Cabinet Committee on Political Affairs has decided today that Caste enumeration should be included in the forthcoming census,” says Union Minister Ashiwini Vaishnaw on Union Cabinet decisions. pic.twitter.com/0FtK0lg9q7
— ANI (@ANI) April 30, 2025
ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯು ಮುಂಬರುವ ಜನಗಣತಿಯಲ್ಲಿ ಜಾತಿ ಎಣಿಕೆಯನ್ನು ಸೇರಿಸಬೇಕೆಂದು ಇಂದು ನಿರ್ಧರಿಸಿದೆ. ರಾಜಕೀಯ ಲಾಭಕ್ಕಾಗಿ ಜಾತಿ ಸಮೀಕ್ಷೆಗಳನ್ನು ವಿರೋಧ ಪಕ್ಷಗಳು ಬಳಸುತ್ತಿವೆ ಎಂದು ಆರೋಪಿಸಿದರು.
ಹಲವಾರು ರಾಜ್ಯಗಳಲ್ಲಿ ನಡೆಸಲಾದ ಜಾತಿ ಜನಗಣತಿ ಕಾರ್ಯವು ಅವೈಜ್ಞಾನಿಕವಾಗಿದೆ ಎಂದು ವೈಷ್ಣವ್ ದೂರಿದರು. ಈ ಸುದ್ದಿಗೋಷ್ಠಿಯಲ್ಲಿ ಪಹಲ್ಗಾಮ್, ಕಾಶ್ಮೀರ ಕುರಿತ ಯಾವುದೇ ಪ್ರಶ್ನೆಗಳಿಗೆ ಉತ್ತರಿಸದ ಅಶ್ವಿನಿ ವೈಷ್ಣವ್ ಕ್ಯಾಬಿನೆಟ್ ಸಭೆಯ ಬಗ್ಗೆ ಮಾತ್ರ ಕೇಳಿ ಎಂದು ಪತ್ರಕರ್ತರಿಗೆ ಹೇಳಿದರು.
2021ರಲ್ಲಿ ಜನಗಣತಿ ನಡೆಯಬೇಕಿತ್ತು. ಆದರೆ ಕೋವಿಡ್ ಕಾರಣದಿಂದ ವಿಳಂಬವಾಗಿದ್ದು 2026 ರಲ್ಲಿ ನಡೆಯುವ ಸಾಧ್ಯತೆಯಿದೆ.