Connect with us

Corona

ಈಗ ಬೆಕ್ಕುಗಳಿಗೂ ಬಂತು ಕೊರೊನಾ

Published

on

ಬ್ರಸೆಲ್ಸ್: ಮನುಷ್ಯರಿಗೆ ವಿಪರೀತ ಕಾಟ ನೀಡುತ್ತಿರುವ ಕೊರೊನಾ ವೈರಸ್ ಇದೀಗ ಬೆಕ್ಕುಗಳಿಗೂ ಹರಡಿದೆ.

ಬೆಕ್ಕಿನ ಮಾಲೀಕನಿಗೆ ಕೊರೊನಾ ಬಂದಿದ್ದು ಆತ ಹೋಮ್ ಕ್ವಾರಂಟೈನ್‍ನಲ್ಲಿದ್ದ. ಇದರಿಂದಾಗಿ ವೈರಸ್ ಬೆಕ್ಕಿಗೂ ಬಂದಿದೆ. ಬೆಕ್ಕಿನಲ್ಲಿ ಕೊರೊನಾ ಸೋಂಕು ಬಂದಿರುವುದನ್ನು ಬೆಲ್ಜಿಯಂನ ಆರೋಗ್ಯ ಅಧಿಕಾರಿಗಳು ಖಚಿತ ಪಡಿಸಿದ್ದಾರೆ.

ಈ ಹಿಂದೆ ಹಾಂಕಾಂಗ್‍ನಲ್ಲಿ ಕೊರೊನಾ ಪೀಡಿತರ ಸಂಪರ್ಕಕ್ಕೆ ಬಂದಿದ್ದ 17 ನಾಯಿ ಮತ್ತು 8 ಬೆಕ್ಕುಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ 2 ನಾಯಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿತ್ತು.

ವೈರಸ್ ಮನುಷ್ಯನಿಂದ ಪ್ರಾಣಿಗಳಿಗೆ ಹೋಗಬಹುದು. ಆದರೆ ಪ್ರಾಣಿಗಳಿಂದ ಮನುಷ್ಯನಿಗೆ ಬರಬಹುದು ಎನ್ನುವುದನ್ನು ನಾನು ಒಪ್ಪುವುದಿಲ್ಲ ಎಂದು ಬೆಲ್ಜಿಯಂ ಆರೋಗ್ಯ ಅಧಿಕಾರಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.

Click to comment

Leave a Reply

Your email address will not be published. Required fields are marked *