ಕೊಪ್ಪಳ: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಾರ್ವಜನಿಕರಿಂದ ಟೀಕೆಗೆ ಗುರಿಯಾದ ಬಳಿಕ ಇದೀಗ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ಗಾವಣೆ ಕುರಿತಂತೆ ರಾಜ್ಯ ಸಕಾರಕ್ಕೆ ಮತ್ತೊಮ್ಮೆ ಭಾರೀ ಮುಖಭಂಗವಾಗಿದೆ.
ತಮ್ಮ ದಿಢೀರ್ ವರ್ಗಾವಣೆ ಪ್ರಶ್ನಿಸಿ ಎಸ್‍ಪಿ ಡಾ.ಅನೂಪ್ ಎ. ಶೆಟ್ಟಿ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ಮೊರೆ ಹೋಗಿದ್ದರು. ಇದೀಗ ಅನೂಪ್ ಶೆಟ್ಟಿ ವರ್ಗಾವಣೆಗೂ ತಾತ್ಕಾಲಿಕ ತಡೆ ನಿಡಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗ
Advertisement
Advertisement
ಒಂದು ವರ್ಷಕ್ಕೂ ಮುನ್ನ ವರ್ಗಾವಣೆ ಮಾಡಲಾಗಿದೆ. ಇದು ನಿಯಮಬಾಹಿರ ಎಂದು ಅನೂಪ್ ಶೆಟ್ಟಿ ಅವರು ಅರ್ಜಿಯಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ ಅನೂಪ್ ವರ್ಗಾವಣೆಗೆ ನ್ಯಾಯಮಂಡಳಿಯಿಂದ ತಡೆ ನಿಡಿದ್ದು, ಮಾರ್ಚ್ 22ರಂದು ಮುಂದಿನ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: ರೋಹಿಣಿ ಸಿಂಧೂರಿ ವಿಚಾರವನ್ನು ಕೇಳಿದ್ದಕ್ಕೆ ಹಾದಿಬೀದಿಯಲ್ಲಿ ಚರ್ಚೆ ಮಾಡೋಕ್ಕಾಗಲ್ಲ ಎಂದ ಸಿಎಂ
Advertisement
ಕಳೆದ 8 ತಿಂಗಳ ಹಿಂದಷ್ಟೇ ಜಿಲ್ಲೆಗೆ ಆಗಮಿಸಿದ ಡಾ.ಅನೂಪ್ ಶೆಟ್ಟಿ ಅಕ್ರಮಗಳಿಗೆ ಕಡಿವಾಣ ಹಾಕಿ ಹೆಸರು ಮಾಡಿದ್ದರು. ಇದೀಗ ಸರ್ಕಾರ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಅನೂಪ್ ಶೆಟ್ಟಿ ಸಿಎಟಿ ಮೊರೆ ಹೋಗಿದ್ದರು.