ಮಂಗಳೂರು: ದಕ್ಷಿಣ ಕನ್ನಡದ (Dakshina Kannada) ಕಡಬದಲ್ಲಿ ಕಾಡಾನೆ (Elephant) ದಾಳಿಯಿಂದಾಗಿ ಇಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಆರಂಭಗೊಂಡಿದೆ.
ಕಡಬ ತಾಲೂಕಿನ ಮೀನಾಡಿಯಲ್ಲಿ ಕಾಡಾನೆ ದಾಳಿಯಿಂದಾಗಿ ಇಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಅರಣ್ಯ ಅಧಿಕಾರಿಗಳು ಹಾಗೂ ಜಿಲ್ಲಾಡಳಿತ ನೇತೃತ್ವದಲ್ಲಿ ಕಾಡಾನೆ ಹಿಡಿಯುವ ಕಾರ್ಯಾಚರಣೆ ಪ್ರಾರಂಭಗೊಂಡಿದೆ. ಇದನ್ನೂ ಓದಿ: ಇಬ್ಬರು ಮಹಿಳಾ ಅಧಿಕಾರಿಗಳಿಗೆ ಸರ್ಕಾರದಿಂದ ಖಡಕ್ ಸೂಚನೆ
Advertisement
Advertisement
ಡಿಸಿಎಫ್ ದಿನೇಶ್ ವೈ.ಕೆ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಗೊಂಡಿದ್ದು, ಕಾರ್ಯಾಚರಣೆಯಲ್ಲಿ ತರಬೇತಿ ಪಡೆದ 30 ಆನೆ ಮಾವುತರು, ಕಾವಾಡಿಗರಿಂದ 5 ಸಾಕಾನೆಗಳನ್ನು 5 ತಂಡಗಳನ್ನಾಗಿ ನಿರ್ಮಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಸ್ಥಳೀಯರು ಸೇರಿದಂತೆ ಸುಳ್ಯ, ಪಂಜ, ಸುಬ್ರಮಣ್ಯ ವಲಯಗಳ 50ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಮರಾಠಾ ಮತಗಳ ಓಲೈಕೆಯಲ್ಲಿ ಕನ್ನಡ ಮಹನೀಯರ ಮರೆತರಾ ಬೆಳಗಾವಿ ರಾಜಕಾರಣಿಗಳು?
Advertisement
LIVE TV
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k