Friday, 23rd August 2019

2 days ago

ಬೀದರ್‌ನಲ್ಲಿ ಮರಗಳಿಗೆ ರಾಖಿ ಕಟ್ಟಿದ ವಿದ್ಯಾರ್ಥಿನಿಯರು

ಬೀದರ್: ಮರಗಳಿಗೆ ರಾಖಿ ಕಟ್ಟುವ ಮೂಲಕ ವಿದ್ಯಾರ್ಥಿನಿಯರು ಪರಿಸರ ರಕ್ಷಣೆಗೆ ಮುಂದಾಗಿದ್ದಾರೆ. ಮರ ಉಳಿಸಿ ಕಾಡು ಬೆಳಸಿ ಎಂದು ವಿದ್ಯಾರ್ಥಿನಿಯರು ಪರಿಸರದ ಜಾಗೃತಿ ಮೂಡಿಸಿದ್ದಾರೆ. ಮರಗಳ ಮಾರಣಹೋಮದಿಂದಾಗಿ ಇಂದು ಪ್ರಕೃತಿ ವಿಕೋಪಗಳು, ಬರಗಾಲ ಸೃಷ್ಟಿಯಾಗಿ ಹನಿ ಹನಿ ನೀರಿಗೂ ರಾಜ್ಯದಲ್ಲಿ ಹಾಹಾಕಾರ ಶುರುವಾಗಿದ್ದು, ಇಂದು ಪರಿಸರವನ್ನು ಹೇಗೆ ನಾವು ಕಾಪಾಡಿಕೊಳ್ಳಬೇಕು ಎಂದು ನೂರಾರು ವಿದ್ಯಾರ್ಥಿನಿಯರು ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಬೀದರ್ ತಾಲೂಕಿನ ಚಿಟ್ಟಾ ಅರಣ್ಯ ಪ್ರದೇಶದಲ್ಲಿರುವ ನೂರಾರು ಮರಗಳಿಗೆ ರಾಖಿ ಕಟ್ಟು ಮೂಲಕ “ಹಸಿರೆ ಉಸಿರು” ಎಂಬ ಜಾಗತಿಕ […]

5 days ago

ರಾಜ್ಯದ ಜನರನ್ನು ದಾರಿ ತಪ್ಪಿಸಲು ಕದ್ದಾಲಿಕೆ ಕೇಸ್ ಸಿಬಿಐಗೆ: ಕಾಶೆಂಪೂರ್

ಬೀದರ್: ರಾಜ್ಯದ ಜನರನ್ನು ದಾರಿ ತಪ್ಪಿಸಲು ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದಾರೆ ಎಂದು ಮಾಜಿ ಸಚಿವ ಬಂಡೆಪ್ಪ ಕಾಶೆಂಪೂರ್ ಸಿಎಂ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಒಂದು ಕಡೆ ಅತಿವೃಷ್ಟಿ ಮೊತ್ತೊಂದು ಕಡೆ ಬರಗಾಲ ತಾಂಡವಾಡುತ್ತಿದ್ದು ಕೇಂದ್ರದಿಂದ ಎಷ್ಟು ಅನುದಾನ ಬರುತ್ತೆ ಎಂದು ಜನ ಕಾಯುತ್ತಿದ್ದಾರೆ....

ಬೀದರ್‌ನಲ್ಲಿ ಮಳೆಗಾಗಿ ಮುಸ್ಲಿಮರಿಂದ ಪ್ರಾರ್ಥನೆ

2 weeks ago

ಬೀದರ್: ಒಂದು ಕಡೆ ಭೀಕರ ಪ್ರವಾಹದಿಂದ ರಾಜ್ಯದ ಜಿಲ್ಲೆಗಳ ಜನರು ಸಂಕಷ್ಟಕ್ಕೆ ಸಿಲುಕಿಸಿದ್ದರೆ, ಗಡಿ ಜಿಲ್ಲೆ ಬೀದರ್‌ನಲ್ಲಿ ಮಾತ್ರ ಬರಗಾಲ ತಾಂಡವಾಡುತ್ತಿದೆ. ಬರಗಾಲದಿಂದ ತತ್ತರಿಸಿ ಹೋಗಿರುವ ಜಿಲ್ಲೆಯ ಜನರಿಗೆ ವರುಣ ದೇವ ಕೃಪೆ ತೋರಲಿ ಎಂದು ಬೀದರ್‌ನಲ್ಲಿ ಇಂದು ಈದ್ಗಾ ಮೈದಾನದಲ್ಲಿ...

ಬ್ರಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವು

2 weeks ago

ಬೀದರ್: ಹೆರಿಗೆಯ ನಂತರ ಬಾಣಂತಿಗೆ ವೈದ್ಯರು ಸೂಕ್ತ ಚಿಕಿತ್ಸೆ ನೀಡದೇ ನಿರ್ಲಕ್ಷಿಸಿದ್ದರಿಂದ ಮಹಿಳೆ ಪ್ರಾಣ ಕಳೆದುಕೊಂಡ ಘಟನೆ ಬೀದರ್ ನ ಬ್ರಿಮ್ಸ್ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಬೀದರ್ ತಾಲೂಕಿನ ಚಟನ್ನಳ್ಳಿ ಗ್ರಾಮದ ನಾಗಮ್ಮ ಎರಡು ದಿನಗಳ ಹಿಂದೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು....

ಖಾಸಗಿ ಆಸ್ಪತ್ರೆಗಳ ಜೊತೆ ಬೀದರ್‌ನಲ್ಲಿ ಸರ್ಕಾರಿ ಆಸ್ಪತ್ರೆಯೂ ಬಂದ್ – ರೋಗಿಗಳ ಪರದಾಟ

3 weeks ago

ಬೀದರ್: ವೈದ್ಯರು ಕರೆ ನೀಡಿದ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಬೀದರ್ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲದೆ, ಬೀದರ್‍ನ ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜು ಸಹ ಬಂದ್ ಆಗಿದ್ದು, ಚಿಕಿತ್ಸೆಗಾಗಿ ರೋಗಿಗಳು ಹಾಗೂ ಗರ್ಭಿಣಿಯರು ಪರದಾಡುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ವೈದ್ಯಕೀಯ...

ಪಂಚಾಯಿತಿ ಅಧಿಕಾರಿಗಳ ಗೋಲ್ಮಾಲ್ – ಬಡವರಿಗೆ ಸೇರಬೇಕಿದ್ದ ಜಮೀನು ಖಾಸಗಿ ವ್ಯಕ್ತಿ ಪಾಲು

3 weeks ago

– ಕೋಟ್ಯಂತರ ರೂ. ಜಮೀನು ಖಾಸಗಿಯವರಿಗೆ ಬೀದರ್: ಸರ್ಕಾರ ಬಡ ಫಲಾನುಭವಿಗಳಿಗೆ ನೀಡಿದ್ದ ಸಿ-ಫಾರ್ಮ್ ಜಮೀನನ್ನು ಪಂಚಾಯಿತಿ ಅಧಿಕಾರಿಗಳು ಖಾಸಗಿ ವ್ಯಕ್ತಿ ಬಳಿ ಕೋಟ್ಯಂತರ ರೂ. ಹಣ ಪಡೆದು ಮಾರಿದ್ದಾರೆ ಎನ್ನುವ ಆರೋಪ ಬಸವಕಲ್ಯಾಣ ತಾಲೂಕಿನಲ್ಲಿ ಕೇಳಿಬಂದಿದೆ. ಪಂಚಾಯತಿ ಅಧಿಕಾರಿಗಳ ಭಾರೀ...

ಕರಾವಳಿಯಲ್ಲಿ ಧಾರಾಕಾರ ಮಳೆ – ಇತ್ತ ಬೀದರ್‌ನಲ್ಲಿ ವರುಣನಿಗಾಗಿ ಪ್ರಾರ್ಥನೆ

1 month ago

ಬೆಂಗಳೂರು: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಭಾರೀ ಮಳೆ ಸುರಿಯುತ್ತಿದೆ. ಉಡುಪಿಯಲ್ಲಿ ಕಳೆದ 24 ಗಂಟೆಯಲ್ಲಿ 60 ಮಿಲಿಮೀಟರ್ ಮಳೆ ದಾಖಲಾಗಿದ್ದು, ನಾಲ್ಕನೇ ದಿನವು ನಿರಂತರ ವರ್ಷಧಾರೆ ಆಗುತ್ತಿದೆ. ಜಿಲ್ಲೆಯ ಕುಂದಾಪುರ, ಕಾರ್ಕಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಾರ್ಮೋಡ ಮುಂದುವರಿದಿದ್ದು...

ಕಲ್ಲಿನಿಂದ ಹೊಡೆದು ಯುವಕನ ಬರ್ಬರ ಕೊಲೆ

1 month ago

ಬೀದರ್: ಕಲ್ಲಿನಿಂದ ಹೊಡೆದು ಯುವಕನ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಹೊರ ವಲಯದ ಚಿಕ್ಕ ಪೇಟೆ ಬಳಿ ಇಂದು ನಡೆದಿದೆ. ನಗರದ ಖಾಸಗಿ ಹೋಟೆಲ್‍ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ಯುವಕ ಶರಣು ಕೊಲೆಯಾದ ದುರ್ದೈವಿ. ಇವನು ಬೀದರ್ ಜಿಲ್ಲೆಯ...