Sunday, 15th July 2018

Recent News

3 days ago

ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಚಿಕ್ಕಬಳ್ಳಾಪುರ ತಲಕಾಯಲಬೆಟ್ಟದ ಕೆರೆಗೆ ಶಾಶ್ವತ ಪರಿಹಾರದ ಭರವಸೆ

ಚಿಕ್ಕಬಳ್ಳಾಪುರ: ರಸ್ತೆಯನ್ನೇ ನುಂಗಿದ್ದ ಕೆರೆಗೆ ಶಾಶ್ವತ ಪರಿಹಾರ ಕೊಡುವ ಭರವಸೆಯನ್ನು ಇಲ್ಲಿನ ಜಿಲ್ಲಾಪಂಚಾಯತ್ ನೀಡಿದೆ. ರಸ್ತೆಯನ್ನೇ ನುಂಗಿದ್ದ ಸಾವಿನಕೆರೆ ಶಿರ್ಷಿಕೆಯಡಿ ಇತ್ತೀಚೆಗೆ ನಿಮ್ಮ ಪಬ್ಲಿಕ್ ಟಿವಿ ತಲಕಾಯಲಬೆಟ್ಟದ ಕೆರೆ ವರದಿಯನ್ನ ಬಿತ್ತರ ಮಾಡಿತ್ತು. ವರದಿಗೆ ಸ್ಪಂದಿಸಿರುವ ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮಂಜುನಾಥ್, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸದ್ಯ ತಾತ್ಕಾಲಿಕ ತೆಪ್ಪ ಹಾಗೂ ಸೇತುವೆ ನಿರ್ಮಾಣ ಮಾಡಿ ಶಾಶ್ವತ ಪರಿಹಾರ ಕೊಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಿಂದ […]

5 days ago

ಕಟಾವು ಮಾಡಿದ್ದ ಬಾಳೆಯ ಬುಡದಲ್ಲಿ ಬಾಳೆಗೊನೆ – ಗ್ರಾಮಸ್ಥರಲ್ಲಿ ಅಚ್ಚರಿ

ಚಿಕ್ಕಬಳ್ಳಾಪುರ: ಬಾಳೆಗೆ ಒಂದೇ ಗೊನೆ. ರಾಗಿಗೆ ಒಂದೇ ತೆನೆ ಫಸಲು. ಆದರೆ ಬುಡದವರೆಗೂ ಕಟಾವು ಮಾಡಲಾಗಿದ್ದ ಬಾಳೆಯ ಬುಡದಲ್ಲಿ ಬಾಳೆಯ ಗೊನೆ ಬೆಳೆದಿದ್ದು, ಗ್ರಾಮಸ್ಥರಲ್ಲಿ ಅಚ್ಚರಿಯನ್ನು ಮೂಡಿಸಿದೆ. ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಗ್ರಾಮದ ಅಯ್ಯಪ್ಪನ ಸನ್ನಿಧಾನದ ಆವರಣದಲ್ಲಿ ಬಾಳೆಯ ಬುಡದಲ್ಲಿ ಬಾಳೆಗೊನೆ ಬೆಳೆದಿದೆ. ಹಿಂದೂ-ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳವಾದ ಮುರಗಮಲ್ಲ ಗ್ರಾಮದಲ್ಲಿ ಒಂದೆಡೆ ದರ್ಗಾ...

ಶ್ರೀ ವಿರಾಂಜನೇಯನ ದರ್ಶನ ಪಡೆದ ನಟಿ ಅಮೂಲ್ಯ, ಪತಿ ಜಗದೀಶ್ ಗೌಡ!

7 days ago

ಚಿಕ್ಕಬಳ್ಳಾಪುರ: ಸ್ಯಾಂಡಲ್‍ವುಡ್ ನಟಿ ಅಮೂಲ್ಯ ಹಾಗೂ ಅವರ ಪತಿ ಜಗದೀಶ್ ಗೌಡ ಚಿಕ್ಕಬಳ್ಳಾಪುರ ನಗರ ಹೊರವಲಯದ ಶ್ರೀ ವಿರಾಂಜನೇಯನ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಆದಿಚುಂಚನಗಿರಿ ಶಾಖಾ ಮಠದ ಉಸ್ತುವಾರಿಯಲ್ಲಿರುವ ಸೂಲಾಲಪ್ಪನದಿನ್ನೆ ಶ್ರೀ ವೀರಾಂಜನೇಯ ದೇಗುಲದಲ್ಲಿ ವಿಶೇಷ ಪ್ರಾರ್ಥನೆ...

ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

1 week ago

ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ. ಗೌರಿಬಿದನೂರು ತಾಲೂಕಿನ...

ಜೆ.ಕೆ.ಕೃಷ್ಣಾರೆಡ್ಡಿಗೆ ಒಲಿದ ವಿಧಾನಸಭೆ ಉಪಸಭಾಧ್ಯಕ್ಷ ಸ್ಥಾನ

1 week ago

ಬೆಂಗಳೂರು: ವಿಧಾನಸಭೆ ಉಪಸಭಾಧ್ಯಕ್ಷರಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಕ್ಷೇತ್ರದ ಜೆಡಿಎಸ್ ಶಾಸಕ ಕೃಷ್ಣಾರೆಡ್ಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭೆಯಲ್ಲಿ ಶಾಸಕ ಕೃಷ್ಣಾರೆಡ್ಡಿ ಅವಿರೋಧ ಆಯ್ಕೆ ಆಗಿರುವ ಕುರಿತು ಸ್ಪೀಕರ್ ರಮೇಶ್ ಕುಮಾರ್ ಘೋಷಣೆ ಮಾಡಿದ್ದಾರೆ. ಅಂದಹಾಗೇ ಶುಕ್ರವಾರ ನಿಗದಿಯಾಗಿದ್ದ ವಿಧಾನಸಭೆ ಉಪಸಭಾಧ್ಯಕ್ಷ...

ನಿದ್ದೆಗೆ ಜಾರಿದ ಕುಡುಕನನ್ನು ಕಚ್ಚಿ ಕಚ್ಚಿ ತಿಂದ ಕರಿ ಇರುವೆಗಳು!

2 weeks ago

ಚಿಕ್ಕಬಳ್ಳಾಪುರ: ಕಂಠಪೂರ್ತಿ ಮದ್ಯ ಕುಡಿದ ಅಮಲಿನಲ್ಲಿ ಗಡದ್ದಾಗಿ ನಿದ್ದೆಗೆ ಜಾರಿದ್ದ ವ್ಯಕ್ತಿಯೊಬ್ಬನನ್ನು ಕರಿ ಇರುವೆಗಳು ಕಚ್ಚಿ-ಕಚ್ಚಿ ತಿಂದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಅಂತರಹಳ್ಳಿ ಗ್ರಾಮದಲ್ಲಿ ನಡೆದಿದೆ. ಅಂತರಹಳ್ಳಿ ಗ್ರಾಮದ ತಿಮ್ಮರಾಜು ಇರುವೆಗಳ ದಾಳಿಗೆ ಒಳಗಾದ ವ್ಯಕ್ತಿ. ಅದೃಷ್ಟವಶಾತ್ ಮಧ್ಯಾಹ್ನವೇ ಘಟನೆ ನಡೆದಿದ್ದರಿಂದ...

ತಂಗಿಯನ್ನು ಶಾಲೆಗೆ ಕರೆದೊಯ್ಯುವ ವೇಳೆ ಬೈಕಿಗೆ ಕಾರು ಡಿಕ್ಕಿ – ವಿದ್ಯಾರ್ಥಿನಿ ಸ್ಥಳದಲ್ಲೇ ದಾರುಣ ಸಾವು

2 weeks ago

ಚಿಕ್ಕಬಳ್ಳಾಪುರ : ತಂಗಿಯನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಬೈಕಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೋನಪ್ಪಲ್ಲಿ ಗ್ರಾಮದ ಗೇಟ್ ಬಳಿ ನಡೆದಿದೆ. ರವಿ ವಿದ್ಯಾನಿಕೇತನ ಪ್ರೌಢ ಶಾಲೆಯ...

ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಾಟಿ ಕೋಳಿಗಳಿಗೂ ಅರ್ಧ ಟಿಕೆಟ್ ಕೊಟ್ಟ ಕಂಡಕ್ಟರ್!

2 weeks ago

 ಚಿಕ್ಕಬಳ್ಳಾಪುರ: 5 ವರ್ಷದೊಳಗಿನ ಮಕ್ಕಳಿಗೆ ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇದೆ. ಇನ್ನೂ 5 ವರ್ಷ ಮೇಲ್ಪಟ್ಟು 6 ರಿಂದ 12 ವರ್ಷದ ಒಳಗಿನ ಮಕ್ಕಳ ಪ್ರಯಾಣಕ್ಕೆ ಅರ್ಧ ಟಿಕೆಟ್ ತೆಗೆದುಕೊಳ್ಳಬೇಕು. ಆದರೆ ಜಿಲ್ಲೆಯಲ್ಲಿ ಕಂಡಕ್ಟರ್ ಒಬ್ಬರು ಕೋಳಿಯೊಂದಿಗೆ ಪ್ರಯಾಣಿಸುತ್ತಿದ್ದ...