Tuesday, 23rd July 2019

Recent News

2 years ago

350 ವರ್ಷದ ವಿಗ್ರಹ ಭಗ್ನಗೊಳಿಸಿದ ಕಿಡಿಗೇಡಿಗಳು

ತುಮಕೂರು: ಕುಚ್ಚಂಗಿ ಗವಿರಂಗನಾಥಸ್ವಾಮಿ ವಿಗ್ರಹವನ್ನು ಕಿಡಿಗೇಡಿಗಳು ಭಗ್ನಗೊಳಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಪೂಜೆ ಸಲ್ಲಿಸಲು ಅರ್ಚಕ ದೇವರಾಜು ತೆರಳಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಸುಮಾರು 350 ವರ್ಷದ ಇತಿಹಾಸ ಇರುವ ಈ ಐತಿಹಾಸಿಕ ವಿಗ್ರಹದ ಕೈಗಳನ್ನು ಮುರಿದು ವಿರೂಪಗೊಳಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಕೋರಾ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಶ್ರೀ ಕ್ಷೇತ್ರದಲ್ಲಿ ಶನಿವಾರದಿಂದ ಆರಾಧನಾ ಮಹೋತ್ಸವ ನಡೆಕಬೇಕಿದ್ದು, ವಿಗ್ರಹ ಭಿನ್ನಗೊಂಡ ಹಿನ್ನಲೆಯಲ್ಲಿ ಸ್ಥಗಿತಗೊಳಿಸಲಾಗಿದೆ.

2 years ago

ಡೆಂಗ್ಯೂ ಜ್ವರಕ್ಕೆ ತುಮಕೂರಿನ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿ

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಾರಕ ಡೆಂಗ್ಯೂ ಜ್ವರಕ್ಕೆ ಎಂಜಿನಿಯರಿಂಗ್ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ. ಸುಷ್ಮಿತಾ ಆರಾಧ್ಯ ಮೃತ ವಿದ್ಯಾರ್ಥಿನಿ. ಈಕೆ ಬೆಂಗಳೂರಿನ ಎಂ.ಎಸ್ ರಾಮಯ್ಯ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತಿದ್ದಳು. ಭಾನುವಾರದಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚಿಕ್ಕನಾಯಕನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡೆಂಗ್ಯೂ ಜ್ವರ ತೀವ್ರ ಸ್ವರೂಪ ಪಡೆದುಕೊಂಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ...

ತುಮಕೂರಿನಲ್ಲಿ ಮರಕ್ಕೆ ಗುದ್ದಿದ ಕಾರ್- ಪತಿ ಸಾವು, ಪತ್ನಿಯ 2 ಕಾಲು ಕಟ್

2 years ago

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಗುದ್ದಿದ ಪರಿಣಾಮ ಪತಿ ಸ್ಥಳದಲ್ಲೇ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಹುಳಿಯಾರಿನಲ್ಲಿ ಈ ಭೀಕರವಾದ ಅಪಘಾತ ಸಂಭವಿಸಿದೆ. ಹುಳಿಯಾರಿನ ಬಸವೇಶ್ವರ ಜ್ಯುವೆಲ್ಲರಿ ಮಾಲೀಕ ಮಲ್ಲಿಕಾರ್ಜುನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾಗೂ...

ವಿಡಿಯೋ: ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

2 years ago

ತುಮಕೂರು: ಶ್ರಾವಣ ಮಾಸ ಎಂದರೆ ಹಬ್ಬಗಳ ಮಾಸ. ಹೆಣ್ಣು ಮಕ್ಕಳಿಗಂತೂ ಪ್ರಿಯವಾದ ಮಾಸ. ಪ್ರತಿಯೊಂದು ಹಬ್ಬದಲ್ಲೂ ಚೆನ್ನಾಗಿ ಅಲಂಕಾರ ಮಾಡಿಕೊಂಡು ಸಡಗರ ಸಂಭ್ರಮದಿಂದ ಖುಷಿಪಡುತ್ತಾರೆ. ಈ ಎಲ್ಲಾ ಹಬ್ಬಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಎಂದರೆ ಎಲ್ಲರಿಗೂ ಬಹಳ ಪ್ರಿಯವಾದುದು. ಪ್ರತಿ ವರ್ಷ ಪೌರ್ಣಮಿಯ...

ಪತ್ನಿ, ಮಗಳು, ಅತ್ತೆ ಮೇಲೆ ಮಚ್ಚಿನಿಂದ ಹಲ್ಲೆಗೈದ ಬ್ಯಾಂಕ್ ಉದ್ಯೋಗಿ

2 years ago

ತುಮಕೂರು: ಮಾನಸಿಕ ಖಿನ್ನತೆಗೊಳಗಾಗಿದ್ದ ಬ್ಯಾಂಕ್ ಉದ್ಯೋಗಿಯೊಬ್ಬ ತನ್ನ ಪತ್ನಿ, ಮಗಳು ಹಾಗೂ ಅತ್ತೆ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಾವಗಡದ ರೇನ್ ಗೇಜ್ ಬಡಾವಣೆಯಲ್ಲಿ ವಾಸವಿದ್ದ ಎಸ್‍ಬಿಐ ಬ್ಯಾಂಕ್ ನ ಉದ್ಯೋಗಿ ರವಿ ಎಂಬಾತ...

ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಸ್ಥಳದಲ್ಲಿ ತಂದೆ, ಮಗ ಸಾವು

2 years ago

ತುಮಕೂರು: ಕ್ವಾಲಿಸ್ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಕ್ವಾಲಿಸ್ ವಾಹನದಲ್ಲಿದ್ದ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಜಲ್ಲೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ನರುಗನಹಳ್ಳಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಜೆಡಿಎಸ್ ತಾಲೂಕು ಅಧ್ಯಕ್ಷ ಎಚ್ ಸಿ...

ತುಮಕೂರಿನಲ್ಲಿ ಬೇಕರಿಯೊಳಗೆ ನುಗ್ಗಿದ ಖಾಸಗಿ ಬಸ್: ಇಬ್ಬರ ದುರ್ಮರಣ

2 years ago

ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಬೇಕರಿಯೊಳಗೆ ನುಗ್ಗಿದ ಪರಿಣಾಮ ಇಬ್ಬರು ಸಾವನಪ್ಪಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಕೊರಟಗೆರೆ ತಾಲೂಕಿನ ಕೋಳಾಲ ವೃತ್ತದಲ್ಲಿ ಈ ದುರಂತ ಸಂಭವಿಸಿದೆ. ಬನಶಂಕರಿ ಬೇಕರಿ ಮಾಲೀಕ ಕುಮಾರ್ ಹಾಗೂ ಬಸ್ ಗಾಗಿ ಕಾಯುತಿದ್ದ...

ತುಮಕೂರು: ಗೋಣಿಚೀಲದಲ್ಲಿ ಕರುಗಳನ್ನು ಕಟ್ಟಿ ಕಸಾಯಿಖಾನೆಗೆ ಸಾಗಾಟ

2 years ago

ತುಮಕೂರು: ಜಿಲ್ಲೆಯಲ್ಲಿ ಜಾನುವಾರುಗಳನ್ನು ಅಮಾನವೀಯವಾಗಿ ಕೈ ಕಾಲುಗಳನ್ನು ಮುರಿದು ಗೋಣಿಚೀಲದಲ್ಲಿ ಹಾಕಿ ಕಸಾಯಿ ಖಾನೆಗೆ ಸಾಗಾಟ ಮಾಡುತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಹುಲಿಯೂರು ದುರ್ಗದ ಸುತ್ತಮುತ್ತಲಿನ ಪ್ರದೇಶದಲ್ಲಿ ಈ ರೀತಿ ನಿರ್ಧಯವಾಗಿ ದನಗಳ ಕರುಗಳನ್ನು ಕಸಾಯಿಖಾನೆಗೆ ಸಾಗಿಸುವರ ಸಂಖ್ಯೆ ಹೆಚ್ಚಾಗಿದೆ. ಸುತ್ತಮುತ್ತಲಿನ...