Thursday, 20th June 2019

Recent News

3 days ago

ಜನರನ್ನ ಸೆಳೆಯುವ ದುಂದು ವೆಚ್ಚದ ಕಾರ್ಯಕ್ರಮವೇ ಗ್ರಾಮ ವಾಸ್ತವ್ಯ: ಕೊಡಿಹಳ್ಳಿ ಚಂದ್ರಶೇಖರ್

ಯಾದಗಿರಿ: ಸಿಎಂ ಮಾಡುತ್ತಿರುವ ಗ್ರಾಮ ವಾಸ್ತವ್ಯ ದುಂದು ವೆಚ್ಚವಾಗಿದ್ದು, ಜನರ ಗಮನವನ್ನು ತಮ್ಮತ್ತ ಸೆಳೆಯಲು ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆಂದು ರೈತ ಸಂಘದ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್ ಟೀಕಿಸಿದ್ದಾರೆ. ಜಿಲ್ಲೆಯಲ್ಲಿ ರೈತ ಸಂಘದ ಕಚೇರಿ ಉದ್ಘಾಟನೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದ್ಯ ಮೈತ್ರಿ ಸರ್ಕಾರ ರಾಜ್ಯದ ಜನರ ಮನಸ್ಸಿನಲ್ಲಿ ಅಸ್ಥಿರಗೊಂಡಿದೆ. ಹೀಗಾಗಿ ಜನರ ಗಮನ ಸೆಳೆಯಲು ಸಿಎಂ ಈ ಗ್ರಾಮ ವಾಸ್ತವ್ಯಕ್ಕೆ ಮುಂದಾಗಿದ್ದಾರೆ ಎಂದು ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡರು. ಸಿಎಂ ವಿಧಾನಸೌಧಲ್ಲಿಯೇ ಕುಳಿತು ಗ್ರಾಮಗಳ ಅಭಿವೃದ್ಧಿಗೆ […]

6 days ago

ಪೊಲೀಸರೇನು ಹುಚ್ಚರಾ? ಪ್ರತಿಭಟನಾಕಾರರ ಮೇಲೆ ಯಾದಗಿರಿ ಎಸ್.ಪಿ ಗರಂ

ಯಾದಗಿರಿ: ಪೊಲೀಸರೇನು ಹುಚ್ಚರಾ ಎಂದು ಪ್ರತಿಭಟನಾ ನಿರತರರಿಗೆ ಸಿನಿಮಾ ಸ್ಟೈಲ್‍ನಲ್ಲಿ ಯಾದಗಿರಿ ಎಸ್.ಪಿ ಋಷಿಕೇಶ್ ಭಗವಾನ್ ಗರಂ ಆಗಿದ್ದಾರೆ. ಇಂದು ಜಿಲ್ಲೆಯ ವಡಗೇರ ಪಟ್ಟಣದಲ್ಲಿ ಅಂಬೇಡ್ಕರ್ ಭಾವಚಿತ್ರ ಸಹಿತ ನಾಮಫಲಕ ಹಾಕುವ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ಸಂರ್ಘಷ ಏರ್ಪಟಿತ್ತು. ಹೀಗಾಗಿ ಸ್ಥಳಕ್ಕೆ ಎಸ್.ಪಿ ಋಷಿಕೇಶ್ ಭಗವಾನ್ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನೆ ಮಾಡುತ್ತಿದ್ದವರು...

ದೋಸ್ತಿ ಸರ್ಕಾರದ ಸಾಲ ಮನ್ನಾದ ರಹಸ್ಯ ಬಯಲು – ರೈತರ ಅಕೌಂಟ್‍ನಿಂದ ಹಣ ವಾಪಸ್

1 week ago

ಯಾದಗಿರಿ: ಸಾಲ ಮನ್ನಾ ಮಾಡಲಾಗಿದೆ ಎಂದು ಹೋದಲ್ಲಿ ಬಂದಲ್ಲಿ ಗಂಟೆಗಟ್ಟಲೆ ಘೋಷಣೆ ಮಾಡುವ ದೋಸ್ತಿ ಸರ್ಕಾರದ ಬಣ್ಣ ಬಯಲಾಗಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರೈತರೊಬ್ಬರ ಖಾತೆಗೆ ಬಂದಿದ್ದ ಸಾಲ ಮನ್ನಾದ ಹಣ, ಹೇಗೆ ಬಂದಿದೆಯೋ ಹಾಗೇ ವಾಪಸ್ ಆಗಿದೆ. ಮುಖ್ಯಮಂತ್ರಿ...

ಗಾಯಾಳುಗಳನ್ನು ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಇಂಜೆಕ್ಷನ್ ಕೊಟ್ಟ ಸಂಸದ ಜಾಧವ್

2 weeks ago

ಯಾದಗಿರಿ: ಅಪಘಾತಕ್ಕೀಡಾಗಿದ್ದ ಗಾಯಾಳುಗಳನ್ನು ಸ್ವಂತ ತಮ್ಮ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿ ಸ್ವತಃ ತಾವೇ ಚಿಕಿತ್ಸೆ ನೀಡಿ ಸಂಸದ ಉಮೇಶ್ ಜಾಧವ್ ಮಾನವೀಯತೆ ಮೆರೆದಿದ್ದಾರೆ. ಯಾದಗಿರಿ ನಗರದ ಕೆಎಸ್ಆರ್‌ಟಿಸಿ ಕಾರ್ಯಾಗಾರ ಬಳಿ ಬೈಕ್ ಮತ್ತು ಟಾಟಾ ಏಸ್ ವಾಹನದ ನಡುವೆ ಅಪಘಾತ ನಡೆದಿತ್ತು....

ವಿಷವಾಗಿದೆ ಜೀವಜಲ – ಗ್ರಾಮದಲ್ಲಿ ನೀರು ಕುಡಿದ್ರೆ ಬರುತ್ತೆ ಕ್ಯಾನ್ಸರ್!

3 weeks ago

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ, ಏವೂರ ದೊಡ್ಡ ತಾಂಡದ ಜನರಿಗೆ ಕುಡಿಯುವ ನೀರು ವಿಷವಾಗಿ ಪರಿಣಮಿಸಿದೆ. ಈ ಗ್ರಾಮದ ನೀರು ಕುಡಿಯಲು ಯೋಗ್ಯವಲ್ಲ ಎಂದು ಸ್ವತಃ ಜಿಲ್ಲಾಡಳಿತವೇ ಒಪ್ಪಿಕೊಂಡಿದೆ. ಏವೂರ ಗ್ರಾಮದ ಕುಡಿಯುವ ನೀರಿನಲ್ಲಿ ಕ್ಯಾನ್ಸರ್ ಕಾರಕ ಆರ್ಸೆನಿಕ್ ಪತ್ತೆಯಾಗಿದ್ದು, ಈ...

ಬಿಜೆಪಿ ಬಿಡುವ ಬಗ್ಗೆ ಶಾಸಕ ರಾಜುಗೌಡ ಸ್ಪಷ್ಟನೆ

3 weeks ago

ಯಾದಗಿರಿ: ಸುರಪುರ ಶಾಸಕ ರಾಜುಗೌಡ ಆಪರೇಷನ್ ಹಸ್ತಕ್ಕೆ ಒಳಗಾಗುತ್ತಾರೆಂಬ ಮಾತುಗಳು ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಅವರೇ ಸ್ಪಷ್ಟನೆ ನೀಡುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಬಿಜೆಪಿ ತೊರೆಯುವ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಶಾಸಕರು, ನಾನು ಯಾವುದೇ ಕಾರಣಕ್ಕೂ...

ತನ್ನದಲ್ಲದ ತಪ್ಪಿಗೆ ಬೈಕ್ ಸವಾರ ಬಲಿ

3 weeks ago

ಯಾದಗಿರಿ: ಕಾಮಗಾರಿ ನಡೆಯುತ್ತಿರುವ ರಸ್ತೆಯಲ್ಲಿ ಆಯಾತಪ್ಪಿ ಬಿದ್ದು ತನ್ನದಲ್ಲದ ತಪ್ಪಿಗೆ ಬೈಕ್ ಸವಾರನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆ ವಡಗೇರ ತಾಲೂಕಿನ ಕುರಕುಂದ ಗ್ರಾಮದ ಬಳಿ ತಡರಾತ್ರಿ ಈ ಘಟನೆ ನಡೆದಿದೆ. ಮೃತ ಬೈಕ್ ಸವಾರ ವಡಗೇರ ತಾಲೂಕಿನ ತಡಿಬಿಡಿ...

ರಂಜಾನ್ ಉಪವಾಸವಿದ್ದರೂ ಪತ್ನಿಯ ಕತ್ತು ಸೀಳಿದ ಪತಿ

3 weeks ago

ಯಾದಗಿರಿ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ ನಂತರ ಪೋಲಿಸರಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪಟ್ಟಣದಲ್ಲಿ ನಡೆದಿದೆ. ಹಮೀದಾಬಿ (31) ಕೊಲೆಯಾದ ಮಹಿಳೆ. ಮಹ್ಮದ್ ಜಾಫರ್ ಹಮೀದಾಬಿಯನ್ನು ಕತ್ತು ಸೀಳಿ ಕೊಲೆ...