Wednesday, 19th September 2018

Recent News

2 months ago

ಪೆಟ್ರೋಲ್, ವಿದ್ಯುತ್ ಆಯ್ತು ಶೀಘ್ರವೇ ಬಸ್ ಪ್ರಯಾಣ ದರ ಏರಿಕೆ?

ಬೆಂಗಳೂರು: ಬಸ್ ಪ್ರಯಾಣದ ದರವನ್ನು ಹೆಚ್ಚಿಸುವ ಸುಳಿವನ್ನು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೊರ ಹಾಕಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಪೆಟ್ರೋಲ್ ಹಾಗೂ ಡೀಸೆಲ್ ತೆರಿಗೆ ಹೆಚ್ಚಳದಿಂದ ಸಾರಿಗೆ ಇಲಾಖೆಯ ನಷ್ಟದ ಪ್ರಮಾಣ ಹೆಚ್ಚಾಗಿದೆ. ಹೀಗಾಗಿ ಇಲಾಖೆಗೆ ಕನಿಷ್ಟ 1 ಸಾವಿರ ಕೋಟಿ ರೂ. ಹೆಚ್ಚುವರಿ ಅನುದಾನ ಕೇಳಿದ್ದೇವೆ. ಇದರೊಂದಿಗೆ 20%ರಷ್ಟು ಪ್ರಯಾಣ ದರ ಹೆಚ್ಚಳಕ್ಕೆ ಎಲ್ಲ ಸಾರಿಗೆ ನಿಗಮಗಳೂ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ. ಬಸ್ ಪ್ರಯಾಣ ದರ ಹೆಚ್ಚಳದ ಬಗ್ಗೆ ಶೀಘ್ರದಲ್ಲೇ ಅಂತಿಮ ನಿರ್ಧಾರ […]

2 months ago

ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ: ಸಿದ್ದರಾಮಯ್ಯ

ಹುಬ್ಬಳ್ಳಿ: ಬಜೆಟ್‍ನಲ್ಲಿ ಉತ್ತರ ಕರ್ನಾಟಕಕ್ಕೆ ಯಾವುದೇ ಅನ್ಯಾಯವಾಗಿಲ್ಲ. ಕಳೆದ ಬಜೆಟ್‍ನಲ್ಲಿಯೇ ಸಾಕಷ್ಟು ಅನುದಾನವನ್ನು ಕೊಟ್ಟಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೈದ್ರಾಬಾದ್ ಕರ್ನಾಟಕಕ್ಕೆ ಸೇರಿದಂತೆ ಅನೇಕ ನೀರಾವರಿ ಯೋಜನೆಗಳಿಗೆ ಅನುದಾನ ನೀಡಿದ್ದೇವೆ. ಈಗ ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ನಾವು ಅಖಂಡ ಕರ್ನಾಟಕದಲ್ಲಿದ್ದೇವೆ. ಅಖಂಡ...

ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ಕೇಳುವವರು ಕಮಂಗಿಗಳು: ತೋಂಟದಾರ್ಯ ಶ್ರೀ

2 months ago

ಬಳ್ಳಾರಿ: ಬಜೆಟ್ ವಿಚಾರ ಇಟ್ಟುಕೊಂಡು ಪ್ರತ್ಯೇಕ ರಾಜ್ಯ ಕೇಳುವ ಶಾಸಕರು, ಹೋರಾಟಗಾರು ಕಮಂಗಿಗಳು ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧಲಿಂಗ ಸ್ವಾಮೀಜಿ ಲೇವಡಿ ಮಾಡಿದ್ದಾರೆ. ನಗರದಲ್ಲಿ ಆಯೋಜಿಸಿದ್ದ ದಿವಂಗತ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ 78 ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ...

ನಿಮಗೆ ವಯಸ್ಸಾಗಿದೆ, ಕುತ್ಕೊಳ್ಳಿ, ಕ್ಷಮೆ ಕೇಳ್ಬೇಡಿ: ಬಿಎಸ್‍ವೈ ಕಾಲೆಳೆದ ಸಿದ್ದರಾಮಯ್ಯ

2 months ago

ಬೆಂಗಳೂರು: ಬಜೆಟ್ ಅಧಿವೇಶನದ ಕೊನೆಯ ದಿನವಾದ ಗುರುವಾರ ವಿರೋಧ ಪಕ್ಷದ ನಾಯಕರ ಯಡಿಯೂರಪ್ಪನವರನ್ನು ಮಾಜಿ ಸಿಎಂ ಸಿದ್ದರಾಮಯ್ಯ ಕಾಲೆಳೆದಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ಅನುದಾನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಿದ್ದರಾಮಯ್ಯ, ನಾವು 10 ಸಾವಿರ ಕೋಟಿ ರೂ. ಕೊಡುವುದಾಗಿ ಪ್ರಣಾಳಿಕೆಯಲ್ಲಿ ತಿಳಿಸಿದ್ದೇವು...

ಬಿಎಸ್‍ವೈಗಾಗಿ ಕುಳಿತಿದ್ದ ಕುರ್ಚಿ ಬಿಟ್ಟು ಕೊಟ್ರು ಎಚ್‍ಡಿಕೆ- ಮಾಜಿ ಸಿಎಂ ಜೊತೆ ಭೋಜನ- ವಿಡಿಯೋ ನೋಡಿ

2 months ago

ಬೆಂಗಳೂರು: ಸದನದಲ್ಲಿ ಭಾರೀ ಚಕಮುಕಿ ನಡೆಸುವ ವಿಪಕ್ಷ ನಾಯಕ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಮುಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರಾಜಕೀಯ ಮರೆತು ಔತಣಕೂಟದಲ್ಲಿ ಭಾಗವಹಸಿ, ಸಹಕಾರದಿಂದ ನಡೆದುಕೊಂಡಿದ್ದಾರೆ. ಇಂದು ಮಧ್ಯಾಹ್ನ ವಿಧಾನಸೌಧದ ಬ್ಯಾಕ್ವೆಂಟ್ ಹಾಲ್‍ನಲ್ಲಿ ಸಿಎಂ ಕುಮಾರಸ್ವಾಮಿ ಅವರು ಭೋಜನ...

ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

2 months ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ’ದಿದ್ದಾರೆ. ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣ ಮತ್ತು ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ...

ರೊಚ್ಚಿಗೆದ್ದು ಜನರು ನಕ್ಸಲರಿಗೆ ಶರಣಾಗಬೇಕಾ: ಸರ್ಕಾರ ವಿರುದ್ಧ ಗುಡುಗಿದ ಸಿ.ಟಿ.ರವಿ

2 months ago

ಬೆಂಗಳೂರು: ಪ್ರಜಾತಂತ್ರದ ಮೇಲೆ ನಂಬಿಕೆಯಿಟ್ಟು ನಕ್ಸಲರಿಗೆ ಬೆಂಬಲಕೊಡಲಿಲ್ಲ. ಜನ ಈಗ ರೊಚ್ಚಿಗೆದ್ದು ನಕ್ಸಲರಿಗೆ ಶರಣಾಗಬೇಕಾ ಹೇಳಿ ಎಂದು ಸದನದಲ್ಲಿ ಸರ್ಕಾರವನ್ನು ಶಾಸಕ ಸಿ.ಟಿ.ರವಿ ತರಾಟೆ ತೆಗೆದುಕೊಂಡರು. ಹಾಸನಕ್ಕೆ ಹೆಚ್ಚಿನ ಅನುದಾನ ಕೊಟ್ಟಿದ್ದಕ್ಕೆ ನಮಗೆ ಬೇಸರವಿಲ್ಲ. ಆದರೆ ನಮ್ಮನ್ನು ಕಡೆಗಣಿಸಿದ್ದೇಕೆ? ಚಿಕ್ಕಮಗಳೂರು ಜಿಲ್ಲೆಯಲ್ಲಿ...

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣ ಬೆಂಬಲಿಸಿ, ವಾಪಸ್ ಪಡೆದ ಶ್ರೀರಾಮುಲು

2 months ago

ಬೆಂಗಳೂರು: ಜೆಡಿಎಸ್ ಸೋತಿರುವ ಕ್ಷೇತ್ರಗಳ ಮೇಲೆ ಸೇಡನ್ನು ಬಜೆಟ್ ಮೂಲಕ ಸಿಎಂ ಎಚ್.ಡಿಕುಮಾರಸ್ವಾಮಿ ಅವರು ತೀರಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಹೀಗಾಗಿ ನಾನು ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಹೋರಾಟವನ್ನು ಬೆಂಬಲಿಸುತ್ತೇನೆ ಎಂದು ಬಿಜೆಪಿಯ ಶಾಸಕ ಬಿ.ಶ್ರೀರಾಮುಲು ಅವರು ಹೇಳಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್...