ನವದೆಹಲಿ: ಮಾಂಸದ ಉದ್ದೇಶದಿಂದ ಜಾನುವಾರು ಮಾರಾಟವನ್ನು ನಿಷೇಧಿಸಿ ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನೋಟಿಸ್ ನಲ್ಲಿ ಎರಡು ವಾರಗಳಲ್ಲಿ ಉತ್ತರಿಸಬೇಕೆಂದು ಸೂಚಿಸಿದ್ದು, ಜುಲೈ 11ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ನ್ಯಾ.ಆರ್‍ಕೆ ಅಗರ್‍ವಾಲ್ ಮತ್ತು ನ್ಯಾ, ಎಸ್‍ಕೆ ಕೌಲ್ ಅವರಿದ್ದ ರಜಾಕಾಲದ ಪೀಠ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ.
Advertisement
ಮಾಂಸ ಉದ್ದೇಶದಿಂದ ಜಾನುವಾರು ಮಾರಾಟವನ್ನು ನಿಷೇಧಿಸಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದನ್ನು ಪ್ರಶ್ನಿಸಿ ಹೈದರಾಬಾದ್ ಮೂಲದ ಫಾಹಿಮ್ ಖುರೇಷಿ ಸುಪ್ರೀಂ ನಲ್ಲಿ ಅರ್ಜಿ ಸಲ್ಲಿಸಿದ್ದರು.
Advertisement
ಕೇಂದ್ರ ಸರ್ಕಾರದ ನಿರ್ಧಾರ ಅಸಂವಿಧಾನಿಕವಾಗಿದ್ದು, ಈ ನಿರ್ಧಾರದಿಂದ ಮಾಂಸ ವ್ಯಾಪಾರೋದ್ಯಮಿಗಳಿಗೆ ಸಮಸ್ಯೆ ಆಗುತ್ತಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದ್ದು, ಮೂಲಭೂತ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.