ಬೆಂಗಳೂರು: ಪರೀಕ್ಷೆ ವೇಳೆ ಕಾಪಿ ಹೊಡೆದ ಎಂಬ ಕಾರಣಕ್ಕೆ ತರಗತಿಯಿಂದ ಟೀಚರ್ (Teacher) ಹೊರಹಾಕಿದ್ದ ವಿದ್ಯಾರ್ಥಿ (Student) ಮೋಹಿನ್ ಎಂಬಾತ ಅಪಾರ್ಟ್ಮೆಂಟ್‌ನ (Apartment) ಹದಿನಾಲ್ಕನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಿನ್ನೆ ನಡೆದಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲಾ ಟೀಚರ್ ವಿರುದ್ಧ ಪ್ರಕರಣ ದಾಖಲಾಗಿದೆ.
Advertisement
ಬೆಂಗಳೂರಿನ (Bengaluru) ನಾಗವಾರ ಬಳಿಯ ಆರ್ ಆರ್ ಸಿಗ್ನೇಚರ್ ಅಪಾರ್ಟ್ಮೆಂಟ್‌ನಲ್ಲಿ ಮೋಹಿನ್ ಆತ್ಮಹತ್ಯೆಗೆ ಶರಣಾಗಿದ್ದ. ಮಹಮ್ಮದ್ ನೂರ್, ನೋಹೇರಾ ದಂಪತಿಯ ಒಬ್ಬನೇ ಮಗನಾಗಿದ್ದ ಮೋಹಿನ್ ಖಾಸಗಿ ಸ್ಕೂಲ್‍ನಲ್ಲಿ ಎಸ್‍ಎಸ್‍ಎಲ್‍ಸಿ ಓದುತ್ತಿದ್ದ. ಪರೀಕ್ಷೆ ನಡೆಯುತ್ತಿದ್ದ ವೇಳೆ ಕಾಪಿ ಹೊಡೆಯುತ್ತಿದ್ದ ಮೋಹಿನ್ ಅನ್ನು ಕಂಡ ಶಿಕ್ಷಕರು ತರಗತಿಯಿಂದ ಹೊರಹಾಕಿದ್ದರು. ಈ ಹಿನ್ನೆಲೆಯಲ್ಲಿ ಬೆಳಗ್ಗೆ ಹನ್ನೊಂದು ಗಂಟೆಗೆ ಸ್ಕೂಲ್‍ನಿಂದ ಮೋಹಿನ್ ಹೊರಬಂದಿದ್ದನು. ಘಟನೆಯಿಂದ ಮನನೊಂದ ಮೋಹಿನ್ ಸಂಜೆ ಐದು ಗಂಟೆ ವೇಳೆಗೆ ಸಿಗ್ನೇಚರ್ ಅಪಾರ್ಟ್ಮೆಂಟ್‌ನ ಹದಿನಾಲ್ಕನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದ. ಆ ಬಳಿಕ ಪೋಷಕರು ನೀಡಿರುವ ದೂರಿನ್ವಯ ಸಂಪಿಗೆಹಳ್ಳಿ ಪೊಲೀಸರು ಟೀಚರ್ ವಿರುದ್ಧ ಎಫ್‍ಐಆರ್ (FIR) ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕಾಪಿ ಹೊಡೆದು ಸಿಕ್ಕಿಬಿದ್ದ ವಿದ್ಯಾರ್ಥಿ- 14ನೇ ಮಹಡಿಯಿಂದ ಹಾರಿ ಆತ್ಮಹತ್ಯೆ
Advertisement
Advertisement
ಪೋಷಕರು ನೀಡಿರುವ ದೂರಿನ್ವಯ ಪ್ರಾಥಮಿಕವಾಗಿ ಶಾಲೆಯ ಶಿಕ್ಷಕರನ್ನು ವಿಚಾರಣೆ ನಡೆಸಿದ ಪೊಲೀಸರು ಐಪಿಸಿ ಸೆಕ್ಷನ್ 306 ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. IPC 306 – ಆತ್ಮಹತ್ಯೆ ಗೆ ಪ್ರಚೋದನೆ ಅಡಿಯಲ್ಲಿ ಟೀಚರ್ ವಿರುದ್ಧವಾಗಿ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಅನಾರೋಗ್ಯದಿಂದ ಬಳಲುತ್ತಿದ್ದಕ್ಕೆ ಹೆತ್ತತಾಯಿಯಿಂದಲೇ ಮಗುವಿನ ಕೊಲೆ
Advertisement
ಪ್ರಕರಣ ಸಂಬಂಧ ಕ್ಲಾಸ್ ಟೀಚರ್, ಅಪಾರ್ಟ್ಮೆಂಟ್‌ನ ಭದ್ರತಾ ಸಿಬ್ಬಂದಿ ಸೇರಿದಂತೆ ಘಟನೆಯ ಬಗ್ಗೆ ಪ್ರತ್ಯಕ್ಷದರ್ಶಿಗಳಿಂದ ಪೊಲೀಸರು ಮಾಹಿತಿ ಕಲೆ ಹಾಕಿದರು. ವಿಚಾರಣೆ ವೇಳೆ ವಿದ್ಯಾರ್ಥಿಯನ್ನು ಕೊಠಡಿಯ ಮುಂಭಾಗ ನಿಲ್ಲಿಸಿದ್ದ ಶಿಕ್ಷಕಿ ಶಾಲೆಯಿಂದ ಹೊರಗೆ ವಿದ್ಯಾರ್ಥಿಯನ್ನು ಕಳುಹಿಸಿರಲಿಲ್ಲ. ಆದರೆ ಸ್ವಲ್ಪ ಹೊತ್ತಿನ ಬಳಿಕ ಟೀಚರ್ ಕೊಠಡಿಯ ಹೊರಬಂದು ನೋಡಿದಾಗ ಆತ ಇರಲಿಲ್ಲ. ಆಗ ಶಾಲಾ ಶಿಕ್ಷಕರು ಸಂಪೂರ್ಣ ಶಾಲೆಯನ್ನು ಹುಡುಕಾಡಿದ್ದರು. ವಿದ್ಯಾರ್ಥಿ ಕಾಣದಿದ್ದಾಗ ತಕ್ಷಣವೇ ಅವರ ಪೋಷಕರಿಗೆ ಮಾಹಿತಿ ನೀಡಿದ್ರು.
ಆತ್ಮಹತ್ಯೆಗೂ ಮುನ್ನ ಅಪಾರ್ಟ್ಮೆಂಟ್ ಪ್ರವೇಶ:
ಮೋಹಿನ್ ಮನೆಯಿರುವುದು ಅಪಾರ್ಟ್ಮೆಂಟ್ ಮುಂಭಾಗದ ರಸ್ತೆಯ ಬದಿಯಲ್ಲಾಗಿದೆ. ಅಪಾರ್ಟ್ಮೆಂಟ್‌ಗೆ ಅಪರಿಚಿತ ಎಂಟ್ರಿ ಇಲ್ಲ, ಆದ್ರೂ ಹೇಗೆ ಅಪಾರ್ಟ್ಮೆಂಟ್‌ನ ಟೆರೇಸ್‍ಗೆ ಮೋಹಿನ್ ಹೋದ ಎಂಬುದರ ಬಗ್ಗೆ ಪ್ರಶ್ನೆ ಇತ್ತು. ಇದು ಪೊಲೀಸರ ತನಿಖೆ ವೇಳೆ ಬಯಲಾಗಿದೆ. ಮೋಹಿನ್ ಅಪಾರ್ಟ್ಮೆಂಟ್‌ಗೆ ಹೋಗುವಾಗ ಅದೇ ಅಪಾರ್ಟ್ಮೆಂಟ್‌ನ ವಿದ್ಯಾರ್ಥಿಯ ಜೊತೆಗೆ ಒಳ ಹೋಗಿದ್ದ ಆ ಅಪಾರ್ಟ್ಮೆಂಟ್‌ನ ವಿದ್ಯಾರ್ಥಿಗೂ ಮೋಹಿನ್ ಗೊತ್ತಿರಲಿಲ್ಲ. ಇನ್ನೊಬ್ಬ ವಿದ್ಯಾರ್ಥಿಯೊಂದಿಗೆ ಈತ ಅಪಾರ್ಟ್ಮೆಂಟ್‌ಗೆ ಹೋಗಿದ್ದರಿಂದ ಸೆಕ್ಯೂರಿಟಿಯವರು ಗೊಂದಲಕ್ಕೀಡಾಗಿದ್ರೂ. ಮೋಹಿನ್ ಸಮವಸ್ತ್ರ ಧರಿಸಿದ್ದರಿಂದ ಸೆಕ್ಯೂರಿಟಿಗೆ ಗೊಂದಲಕ್ಕೀಡಾಗಿ ಒಳಬಿಟ್ಟಿದ್ದರು ಎಂಬ ಸತ್ಯ ವಿಚಾರಣೆ ವೇಳೆ ಬಯಲಾಗಿದೆ.
Live Tv
[brid partner=56869869 player=32851 video=960834 autoplay=true]