ಛತ್ತೀಸಗಢ: ಸರ್ಕಾರಗಳು ಹಾಗೂ ಪೊಲೀಸ್ ಇಲಾಖೆ ಎಷ್ಟೇ ಕಠಿಣ ನಿಯಮಗಳನ್ನು ಜಾರಿಗೊಳಿಸಿದರೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವವರು ಇದ್ದೇ ಇರುತ್ತಾರೆ. ನಿಯಮಗಳನ್ನು ಗಾಳಿಗೆ ತೂರಿ ಸಂಚಾರ ಮಾಡುವವರೇ ಹೆಚ್ಚು. ಇದಕ್ಕೆ ಬ್ರೇಕ್ ಹಾಕಲು ಪಂಜಾಬ್ ಪೊಲೀಸ್ ಇಲಾಖೆ ಮುಂದಾಗಿದೆ.
ಅತಿ ವೇಗವಾಗಿ ವಾಹನ ಚಲಾಯಿಸುವುದು, ಮದ್ಯಪಾನ ಅಥವಾ ಮಾದಕ ದ್ರವ್ಯ ಸೇವಿಸಿ ವಾಹನ ಚಲಾಯಿಸುವವರಿಗೆ ಕಡ್ಡಾಯ ರಕ್ತದಾನ ಮಾಡುವ ಶಿಕ್ಷೆಯನ್ನು ವಿಧಿಸುವ ನಿಯಮ ರೂಪಿಸಲು ಮುಂದಾಗಿದೆ. ದಂಡ ಹಾಕುವುದು, ತಾತ್ಕಾಲಿಕವಾಗಿ ಲೈಸೆನ್ಸ್ ರದ್ದು ಮಾಡುವ ಶಿಕ್ಷೆಯ ಜೊತೆಗೆ ರಕ್ತದಾನ ಮಾಡುವ ಶಿಕ್ಷೆ ವಿಧಿಸುವ ಹೊಸ ನಿಯಮ ಜಾರಿ ಮಾಡಲಾಗುವುದು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಪೈಸ್‌ಜೆಟ್ ವಿಮಾನ ಹಾರಾಟ ನಿಲ್ಲಿಸಿ – ದೆಹಲಿ ಹೈಕೋರ್ಟ್‌ನಲ್ಲಿ ಮನವಿ
Advertisement
Advertisement
ಅತಿ ವೇಗವಾಗಿ ವಾಹನ ಚಲಾಯಿಸಿದರೆ 1,000 ರೂ. ದಂಡ ಮತ್ತು ಮೂರು ತಿಂಗಳವರೆಗೆ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲಾಗುವುದು. ಕುಡಿದು ವಾಹನ ಚಲಾಯಿಸಿದರೆ ಅದೇ ಅವಧಿಗೆ ಪರವಾನಗಿ ಅಮಾನತುಗೊಳಿಸುವುದರ ಜೊತೆಗೆ 5,000 ರೂ. ದಂಡ ವಿಧಿಸಲಾಗುತ್ತದೆ.
Advertisement
ಮತ್ತೆ ಅದೇ ತಪ್ಪು ಮಾಡಿ ಸಿಕ್ಕಿ ಹಾಕಿಕೊಂಡರೆ ಅತಿ ವೇಗದ ಚಾಲನೆಗೆ 2,000 ರೂ. ಮತ್ತು ಮೂರು ತಿಂಗಳ ಅವಧಿಗೆ ಪರವಾನಗಿ ಅಮಾನತು. ಕುಡಿದು ವಾಹನ ಚಲಾಯಿಸಿದರೆ 10,000 ರೂ. ದಂಡ ಹಾಗೂ 3 ತಿಂಗಳ ಅವಧಿಗೆ ಲೈಸೆನ್ಸ್ ರದ್ದು ಮಾಡಲಾಗುವುದು.
Advertisement
ನಿಯಮ ಉಲ್ಲಂಘಿಸುವವರು ಸಾರಿಗೆ ಪ್ರಾಧಿಕಾರದಿಂದ ಸಂಚಾರಿ ನಿಯಮ ಕುರಿತು ತಿಳಿದುಕೊಳ್ಳಬೇಕು. ನಂತರ ಹತ್ತಿರದ ಶಾಲೆಯಲ್ಲಿ ಕನಿಷ್ಠ ಎರಡು ಗಂಟೆಗಳ ಕಾಲ 9 ರಿಂದ 12 ನೇ ತರಗತಿಯ ಕನಿಷ್ಠ 20 ವಿದ್ಯಾರ್ಥಿಗಳಿಗೆ ಅದನ್ನು ಕಲಿಸಬೇಕು. ನಂತರ ಅವರಿಗೆ ನೋಡಲ್ ಅಧಿಕಾರಿಯಿಂದ ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಇದನ್ನೂ ಓದಿ: ಉಪರಾಷ್ಟ್ರಪತಿ ಹುದ್ದೆಗೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಮಂಗಳೂರು ಮೂಲದ ಮಾರ್ಗರೇಟ್ ಆಳ್ವಾ ಆಯ್ಕೆ
ಇದರ ಜೊತೆಗೆ ತಪ್ಪಿತಸ್ಥರು ಹತ್ತಿರದ ಆಸ್ಪತ್ರೆಯಲ್ಲಿ ಕನಿಷ್ಠ ಎರಡು ಗಂಟೆಗಳ ಕಾಲ ಸಮಾಜ ಸೇವೆ ಮಾಡಬೇಕು ಅಥವಾ ಹತ್ತಿರದ ರಕ್ತನಿಧಿಯಲ್ಲಿ ಕನಿಷ್ಠ ಒಂದು ಯೂನಿಟ್ ರಕ್ತವನ್ನು ದಾನ ಮಾಡಬೇಕು.
ರೆಡ್ ಸಿಗ್ನಲ್ ಜಂಪ್ ಮಾಡಿದರೆ ಮೊದಲ ಅಪರಾಧಕ್ಕೆ 1,000 ರೂ. ಮತ್ತು ನಂತರದ ಅಪರಾಧಗಳಿಗೆ 2,000 ರೂ., ಚಾಲನೆ ಮಾಡುವಾಗ ಮೊಬೈಲ್ ಫೋನ್‌ಗಳನ್ನು ಬಳಸಿದರೆ 5,000 ರೂ. ನಂತರ 10,000 ರೂ., ಓವರ್‌ಲೋಡ್ ಅಥವಾ ಗೂಡ್ಸ್ ಕ್ಯಾರೇಜ್‌ನಲ್ಲಿರುವ ವ್ಯಕ್ತಿಗಳಿಗೆ 20,000 ರೂ. ನಂತರ 2,000 ಹೆಚ್ಚುವರಿ ದಂಡ, ದ್ವಿಚಕ್ರ ವಾಹನಗಳಲ್ಲಿ ಇಬ್ಬರಿಗಿಂತ ಹೆಚ್ಚು ಮಂದಿ ಇದ್ದರೆ 1,000 ರೂ. ನಂತರ 2,000 ರೂ. ದಂಡ ವಿಧಿಸಲಾಗುವುದು.