ಮೀರತ್: ಮದ್ಯದ ವಿಷಯಕ್ಕೆ ಜಗಳ ಶುರುವಾಗಿದ್ದು, ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರಪ್ರದೇಶದ ಮೀರತ್‍ನಲ್ಲಿ ನಡೆದಿದೆ. ಕೊಲೆ ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಉತ್ತರ ಪ್ರದೇಶದ ಮೀರತ್ ನಡುರಸ್ತೆಯಲ್ಲಿ ಮೂವರು ಆರೋಪಿಗಳು ವ್ಯಕ್ತಿಯೊಬ್ಬನನ್ನು ಇರಿದು ಕೊಂದಿರುವ ಆಘಾತಕಾರಿ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದಕ್ಕೆ ಮೂಲ ಕಾರಣ, ಕೊಲೆಯಾದ ವ್ಯಕ್ತಿ ಜೊತೆಗೆ ಆರೋಪಿಗಳು ಮದ್ಯಪಾನದ ವಿಚಾರವಾಗಿ ಜಗಳವಾಡಿದ್ದರು. ಈ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯನ್ನು ನಡುರಸ್ತೆಯಲ್ಲಿ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ
Advertisement
Advertisement
ನಡೆದಿದ್ದೇನು?
ಪೊಲೀಸ್ ಮೂಲಗಳ ಪ್ರಕಾರ, ಲಿಸಾರಿ ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಫಿರೋಜ್ ನಗರದ ನಿವಾಸಿ ಸಾಜಿದ್(25) ಬ್ರಹ್ಮಪುರಿ ಪೊಲೀಸ್ ಠಾಣೆ ವ್ಯಾಪ್ತಿಯ ಇತ್ತೆಫಾಕ್ ನಗರಕ್ಕೆ ಯಾವುದೋ ಖಾಸಗಿ ಕೆಲಸಕ್ಕೆ ಹೋಗಿದ್ದಾನೆ. ಈ ವೇಳೆ ಹಿಂದಿನಿಂದ ಬಂದ ಕೆಲ ದಾಳಿಕೋರರು ಸಾಜಿದ್‍ನನ್ನು ಹಿಡಿದು ಚಾಕುವಿನಿಂದ ತೀವ್ರವಾಗಿ ಇರಿದಿದ್ದಾರೆ.
Advertisement
UP | A man was allegedly murdered by his close relatives over a personal dispute in Meerut on Sunday. All 3 accused will be arrested soon. Throughout incident, people pass by on both sides of the road but nobody stopped to help the victim:SP (city), #Meerut, Vineet Bhatnagar pic.twitter.com/waCvdsD5Gm
— Siraj Noorani (@sirajnoorani) April 24, 2022
Advertisement
ಸಾಜಿದ್ ಕೊಲೆಯ ಸಂಪೂರ್ಣ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆಯ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರಿಗೆ ವಿಷಯ ತಿಳಿದ ತಕ್ಷಣ ಸಾಜಿದ್‍ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಪ್ರಸ್ತುತ ಪೊಲೀಸರು ಘಟನೆ ಕುರಿತು ಮಾಹಿತಿ ನೀಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಘಟನೆಯ ಲೈವ್ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.
ಸಂಬಂಧಿಕರಿಂದಲ್ಲೇ ಕೊಲೆ
ಘಟನೆ ಕುರಿತು ಸಾಜಿದ್ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಶನಿವಾರ ನನ್ನ ಮಗ ಅವರ ಚಿಕ್ಕಪ್ಪ ನೌಶಾದ್, ಜಾವೇದ್ ಮತ್ತು ಶಹಜಾದ್ ಅವರೊಂದಿಗೆ ಮನೆಯಲ್ಲಿಯೇ ಮದ್ಯ ಸೇವಿಸಿ ಜಗಳವಾಡಿದ್ದರು. ಆದರೆ, ತಡರಾತ್ರಿ ಕುಟುಂಬಸ್ಥರೆಲ್ಲ ಸೇರಿ ಇವರಿಗೆ ರಾಜಿ ಮಾಡಿಸಿದ್ದೆವು. ಈ ದ್ವೇಷದಿಂದಲೇ ಸಾಜಿದ್ ಕೊಲೆ ಮಾಡಲಾಗಿದೆ ಎಂದು ಶಂಕೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಖಾಸಗಿ ಬಸ್ ನಿಲ್ದಾಣದಲ್ಲಿ ನವಜಾತ ಗಂಡು ಶಿಶು ಪತ್ತೆ
ಮೀರತ್‍ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಪ್ರಭಾಕರ್ ಚೌಧರಿ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ನಾವು ಆರೋಪಿಗಳ ಮನೆಗಳ ಮೇಲೆ ದಾಳಿ ಮಾಡಿದ್ದೇವೆ. ಆದರೆ ಅವರು ಪರಾರಿಯಾಗಿದ್ದಾರೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಭರವಸೆ ಕೊಟ್ಟರು.