ಹೈದರಾಬಾದ್: ಲಂಚ ಸ್ವೀಕರಿಸುವ ವೇಳೆ ತೆಲಂಗಾಣದ (Telangana) ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಎಸಿಬಿಗೆ (Anti-Corruption Bureau) ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಮಹಿಳೆ ಎಸಿಬಿಗೆ ಸಿಕ್ಕಿಬಿದ್ದ ಬಳಿಕ ಅಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಬುಡಕಟ್ಟು ಕಲ್ಯಾಣ ಇಲಾಖೆಯ (Telangana’s Tribal Welfare Engineering department) ಕಾರ್ಯನಿರ್ವಾಹಕ ಎಂಜಿನಿಯರ್ ಕೆ.ಜಗಜ್ಯೋತಿ 84,000 ರೂ. ಲಂಚ ಪಡೆಯುವ ವೇಳೆ ಎಸಿಬಿ ಬಲೆಗೆ ಬಿದ್ದಿದ್ದಾರೆ. ವ್ಯಕ್ತಿಯೊಬ್ಬರು ಲಂಚ ಅಧಿಕಾರಿ ಕೇಳುತ್ತಿದ್ದಾರೆ ಎಂದು ಎಸಿಬಿಗೆ ದೂರು ನೀಡಿದ್ದರು. ಇದರಿಂದ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು ಲಂಚ ಸ್ವೀಕರಿಸುತ್ತಿದ್ದ ವೇಳೆಯೇ ಬಂಧಿಸಿದ್ದಾರೆ. ಇದನ್ನೂ ಓದಿ: ರಾಹುಲ್ ಆದೇಶದ ಮೇರೆಗೆ ವಯನಾಡು ವ್ಯಕ್ತಿಗೆ 15 ಲಕ್ಷ ಪರಿಹಾರ – ಸರ್ಕಾರದ ವಿರುದ್ಧ ವಿಜಯೇಂದ್ರ ಕಿಡಿ
Advertisement
Advertisement
ಜಗಜ್ಯೋತಿ ಅವರನ್ನು ಫಿನಾಲ್ಫ್ಥಲೀನ್ ಪರೀಕ್ಷೆಗೆ ಎಸಿಬಿ ಅಧಿಕಾರಿಗಳು ಒಳಪಡಿಸಿದಾಗ ಅವರು ಲಂಚ ಪಡೆದಿರುವುದು ಸಾಬೀತಾಗಿದೆ. ಅವರು ಕರ್ತವ್ಯ ನಿರ್ವಹಣೆಯಲ್ಲಿ ಅನುಚಿತವಾಗಿ ಮತ್ತು ಅಪ್ರಾಮಾಣಿಕವಾಗಿ ವರ್ತಿಸಿದ್ದಾರೆ ಎಂದು ಎಸಿಬಿ ಅಧಿಕಾರಿಗಳು ಆರೋಪಿಸಿದ್ದಾರೆ.
Advertisement
Advertisement
ಅಧಿಕಾರಿಯ ಬಳಿ ಇದ್ದ 84,000 ರೂ. ಲಂಚದ ಹಣವನ್ನು ವಶಪಡಿಸಿಕೊಳ್ಳಲಾಗಿದೆ. ಅವರನ್ನು ಹೈದರಾಬಾದ್‍ನ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಎಸಿಬಿ ಸಿದ್ಧತೆ ನಡೆಸಿದೆ. ಇದನ್ನೂ ಓದಿ: ಡ್ರೈವರ್‌ಲೆಸ್ ಮೆಟ್ರೋದ ಫಸ್ಟ್ ಫೋಟೋ ರಿವೀಲ್