ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ (Cauvery Drinking Water Project) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ಚಾಲನೆ ನೀಡಿದರು.
2014ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿದ್ದಾಗ ಶಂಕುಸ್ಥಾಪನೆ ನೆರವೇರಿಸಿ, ಇಂದು ನಾನೇ ಲೋಕಾರ್ಪಣೆಗೊಳಿಸುತ್ತಿರುವ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆಯ ಪಕ್ಷಿ ನೋಟ:
• ಬೆಂಗಳೂರಿನ ನಿರಂತರ ಬೆಳವಣಿಗೆ ಮತ್ತು ಜನಸಂಖ್ಯೆಯ ಹೆಚ್ಚಳದಿಂದಾಗಿ ಹೊಸ ಸಂಪನ್ಮೂಲಗಳ ಹುಡುಕಾಟದ ಅವಶ್ಯಕತೆ ಕಂಡು ಬಂದಿತ್ತು. ಆಗ ಹೊಳೆದದ್ದೆ ಕಾವೇರಿ ನದಿಯ… pic.twitter.com/FkvdkeE6ue
— Siddaramaiah (@siddaramaiah) October 16, 2024
ಮಂಡ್ಯ (Mandya) ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿಯ ಬೆಂಗಳೂರು ಜಲಮಂಡಳಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ, ಡಿಸಿಎಂ ಜಂಟಿಯಾಗಿ ಲೋಕಾರ್ಪಣೆಗೊಳಿಸಿದರು. ಇದನ್ನೂ ಓದಿ: ವಾಯು ಮಾಲಿನ್ಯ ನಿಯಂತ್ರಣಕ್ಕೆ ಕ್ರಮಕೈಗೊಳ್ಳದ ಹರಿಯಾಣ, ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಛೀಮಾರಿ
ಯೋಜನೆಯನ್ನು ಲೋಕಾರ್ಪಣೆಗೊಳಿಸುವುದಕ್ಕೂ ಮುನ್ನ ಚಂಡಿಕಾ ಹೋಮ, ಗಣಪತಿ ಪೂಜೆ, ಯಜಮಾನ ಸಂಕಲ್ಪ, ಮಹಾ ಸುದರ್ಶನ ಚಕ್ರ ಪೂಜೆ, ಸುದರ್ಶನ ಹೋಮ, ಮಹಾಚಂಡಿ ಕಳಾಸರಾಧನೆ, ಮಹಮಂಗಳಾರತಿ ನೆರವೇರಿಸಲಾಯಿತು. ಮಹಾಸಂಕಲ್ಪ, ಚಂಡಿ ನವ ಬ್ರಹ್ಮ ಪೂಜೆ, ದುರ್ಗಾ ಸಪ್ತ ಸತಿ ನಾರಾಯಾಣ ಸೇರಿದಂತೆ 13 ಅಧ್ಯಾಯ, ಗಂಗಾ, ಯಮುನಾ, ಸರಸ್ವತಿ, ನರ್ಮದಾ, ಸಿಂಧು, ಕಾವೇರಿ ಮೊದಲಾದ ಸಪ್ತ ನದಿಗಳ ಕಳಸ ಸ್ಥಾಪನೆ ಮಾಡಿ ಪೂಜೆ ಸಲ್ಲಿಸಲಾಯಿತು. ಮಹಾ ಪೂರ್ಣಾವತಿ, ಮಂಗಳ ದ್ರವ್ಯ ಸಮರ್ಪಣೆ ಮಹಾ ಮಂಗಳಾರತಿ ಸೇರಿ ಹೋಮ-ಹವನ ನೆರವೇರಿಸಲಾಯತು.
ಶೈವಾಗಮ ವಿಶಾರಾಧ ಜ್ಞಾನ ಸ್ಕಂದ ದೀಕ್ಷಿತರ ನೇತೃತ್ವದಲ್ಲಿ ಪೂಜಾ ಕೈಂಕಾರ್ಯ ನಡೆಯಿತು. ಡಿಸಿಎಂ ಡಿ.ಕೆ ಶಿವಕುಮಾರ್ ಪೂಜಾ ಕೈಂಕಾರ್ಯ ನೆರವೇರಿಸಿದರು. ಡಿಕೆಶಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಾಥ್ ನೀಡಿದರು. ಇದೇ ವೇಳೆ ಜಾನಪದ ಕಲಾ ತಂಡಗಳ ಮೆರವಣಿಗೆಯೂ ನಡೆಯಿತು. ಇದನ್ನೂ ಓದಿ: ಮಂಗನ ಕಾಯಿಲೆಗೆ ಲಸಿಕೆ: ಐಸಿಎಂಆರ್ ಮಹಾನಿರ್ದೇಶಕರ ಜೊತೆ ದಿನೇಶ್ ಗುಂಡೂರಾವ್ ಚರ್ಚೆ
ಬಿಬಿಎಂಪಿ ವ್ಯಾಪ್ತಿಯಲ್ಲಿರುವ 110 ಹಳ್ಳಿಗಳಿಗೆ ನೀರು ಪೂರೈಸುವ ಯೋಜನೆ ಇದಾಗಿದೆ. 50 ಲಕ್ಷ ಫಲಾನುಭವಿಗಳಿಗೆ 4 ಲಕ್ಷ ಸಂಪರ್ಕ ಕಲ್ಪಿಸುವ ಮಹತ್ವಾಕಾಂಕ್ಷೆ ಹೊಂದಿದೆ. ಸುಮಾರು 4,336 ಕೋಟಿ ರೂ. ವೆಚ್ಚದ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದ್ದು, 775 ಎಂ.ಎಲ್.ಡಿ ಹೆಚ್ಚುವರಿ ನೀರು ಸರಬರಾಜು ಮಾಡುವ ಗುರಿ ಹೊಂದಿದೆ. ಇದರಿಂದ ಯಲಹಂಕ, ಯಶವಂತಪುರ, ಬೆಂಗಳೂರು ದಕ್ಷಿಣ, ಬ್ಯಾಟರಾಯನಪುರ, ಬೊಮ್ಮನಹಳ್ಳಿ ವಲಯದ ಮನೆ-ಮನೆಗೂ ಕಾವೇರಿ ನೀರು ಪೂರೈಕೆಯಾಹಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ತಿಳಿಸಿದ್ದಾರೆ.