ಮಂಡ್ಯ: ಕಾವೇರಿ (Cauvery Water) ಕಿಚ್ಚು ಹೆಚ್ಚಾಗುತ್ತಿದ್ದು, ಇಂದು ಮಂಡ್ಯ ಹಾಗೂ ಮದ್ದೂರ್ ಬಂದ್ (Mandya & Maddur Bandh) ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.
ಸುಪ್ರೀಂ ಕೋರ್ಟ್ (Supreme Court) ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳಿಂದ ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎರಡೂ ನಗರಗಳು ಸಂಪೂರ್ಣ ಸ್ಥಬ್ದವಾಗಲಿದೆ. ವರ್ತಕರ ಸಂಘ, ಹೋಟೆಲ್, ಪೆಟ್ರೋಲ್ ಬಂಕ್ ಮಾಲೀಕರು, ಆಟೋ ಚಾಲಕರು, ಖಾಸಗಿ ಬಸ್, ಲಾರಿ ಮಾಲೀಕರು ಸಂಘಗಳು ಬೆಂಬಲ ಸೂಚಿಸಿದ್ದು. ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳಿಂದಲೂ ಬಂದ್ ಬೆಂಬಲಿಸಿ ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಬೆಳಗ್ಗೆ 8ಗಂಟೆಗೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಬಳಿಕ ರೈತ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ಮಂಡ್ಯದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಯಲಿದ್ದು, ಮತ್ತೊಂದು ತಂಡದಿಂದ ನಗರದ ಹಲವು ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಯಲಿದೆ. ಅಂಗಡಿ ಮುಂಗಟ್ಟು ಮುಚ್ಚಿ ಬಂದ್ ಬೆಂಬಲಿಸುವಂತೆ ಪ್ರತಿಭಟನಾಕಾರರು ಮನವಿ ಮಾಡಲಿದ್ದಾರೆ. ಇದನ್ನೂ ಓದಿ: ಕಾವೇರಿಗಾಗಿ ಶನಿವಾರ ಮಂಡ್ಯ ಬಂದ್ – ಏನಿರುತ್ತೆ? ಏನಿರಲ್ಲ?
10 ಗಂಟೆಗೆ ಸಂಜಯ ವೃತ್ತದಲ್ಲಿ ಪ್ರತಿಭಟನೆ, ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಿದ್ದು, ರೈತ ಸಂಘ, ಕನ್ನಡ ಪರ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗಿಯಾಗಲಿವೆ. ಮದ್ದೂರಿನಲ್ಲಿ ಬೆಳಗ್ಗೆ 9 ಗಂಟೆಗೆ ಪ್ರತಿಭಟನೆ ಆರಂಭವಾಗಲಿದೆ. ಮದ್ದೂರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ಹಾಗೂ ಬೈಕ್ ರ್ಯಾಲಿ, ಬಳಿಕ ಮದ್ದೂರಿನ ಕೊಲ್ಲಿ ಸರ್ಕಲ್‍ನಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದೆ.
ಬಂದ್ ಹಿನ್ನೆಲೆ ಎರಡೂ ನಗರಗಳಲ್ಲಿ ಖಾಕಿ ಅಲರ್ಟ್ ಆಗಿದೆ. ಆಯಕಟ್ಟಿನ ಸ್ಥಳಗಳಲ್ಲಿ ಬಿಗಿ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಅಹಿತಕರ ಘಟನೆ ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮಕ್ಕೆ ಪೊಲೀಸ್ ಇಲಾಖೆ ಸನ್ನದ್ಧವಾಗಿದೆ. ಎಸ್‍ಪಿ, ಎಎಸ್‍ಪಿ, ಮೂವರು ಡಿವೈಎಸ್‍ಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಸೇರಿ 400 ಕ್ಕೂ ಹೆಚ್ಚು ಪೊಲೀಸರನ್ನು ಸ್ಥಳದಲ್ಲಿ ನಿಯೋಜನೆ ಮಡಲಾಗಿದೆ. ಜೊತೆಗೆ 6 ಕೆ.ಎಸ್.ಆರ್.ಪಿ, 5 ಡಿಎಆರ್ ತುಕಡಿ ನಿಯೋಜಿಸಲಾಗಿದೆ.
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]