ಬೆಂಗಳೂರು: ಒಂದು ಕಡೆ ಮಳೆಯ ಸುಳಿವಿಲ್ಲ, ಕ್ಷಾಮ ಆವರಿಸುತ್ತಿದೆ, ಜಲಾಶಯಗಳಲ್ಲೂ ನೀರಿನ ಸಂಗ್ರಹ ಮಟ್ಟ ಗಣನೀಯವಾಗಿ ಕುಸಿದಿದೆ. ಈ ಹೊತ್ತಲ್ಲೇ ಗಾಯದ ಮೇಲೆ ಬರೆ ಎಳೆಯುವ ರೀತಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಕರುನಾಡಿಗೆ ಬಿಗ್ ಶಾಕ್ ನೀಡಿದೆ. ಕರ್ನಾಟಕ (Karnataka) ವಾಸ್ತವ ವರದಿಯನ್ನು ಮನವರಿಕೆ ಮಾಡಿಕೊಟ್ಟಿದ್ದರೂ ತಮಿಳುನಾಡು (Tamil Nadu) ವಾದಕ್ಕೆ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಮಣೆ ಹಾಕಿದೆ. ಮುಂದಿನ 15 ದಿನಗಳ ಕಾಲ ನಿತ್ಯ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
ನಮ್ಮ ಬೆಳೆಗಳು ಒಣಗುತ್ತಿವೆ. ಕಳೆದ ಬಾರಿ ಆದೇಶದಂತೆ ನಿತ್ಯ 5000 ಕ್ಯೂಸೆಕ್ ನೀರು ಬಿಡಬೇಕಿತ್ತು. ಆದರೆ ಕರ್ನಾಟಕ ನಿತ್ಯ 3000-3400 ಕ್ಯೂಸೆಕ್ ಬಿಡುಗಡೆ ಮಾಡಿದೆ. 36.76 ಟಿಎಂಸಿ ಬಿಡುಗಡೆ ಬಾಕಿ ಉಳಿಸಿಕೊಂಡಿದೆ ಎಂದು ತಮಿಳುನಾಡು ವಾದ ಮಂಡಿಸಿತ್ತು. ಕರ್ನಾಟಕ ವಾಸ್ತವ ಪರಿಸ್ಥಿತಿ ವಿವರಿಸಿದರೂ ಕೂಡ ತಮಿಳುನಾಡು ವಾದಕ್ಕೆ ಸಮಿತಿ ಮಣೆ ಹಾಕಿದೆ. ನಿತ್ಯ 5000 ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ಹೀಗಾಗಿ ರಾಜ್ಯ ಸರ್ಕಾರದ ಮುಂದಿನ ನಡೆ ಏನು ಎಂಬುದು ಸದ್ಯದ ಕುತೂಹಲ. ಇದನ್ನೂ ಓದಿ: ಉಡುಪಿಯಲ್ಲಿ ಚೈತ್ರಾ ಕುಂದಾಪುರ ಅರೆಸ್ಟ್
Advertisement
Advertisement
ಸರ್ಕಾರದ ಮುಂದಿನ ನಡೆ ಏನು?
ಈಗಿನ ಪರಿಸ್ಥಿತಿಯಲ್ಲಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಕಷ್ಟ. ಇಂದು ಸಿಡಬ್ಲ್ಯೂಎಂಎ ಸಭೆಯಲ್ಲಿ ರಾಜ್ಯದ ಕಷ್ಟದ ಪರಿಸ್ಥಿತಿಯನ್ನು ವಿವರಿಸಿ ಸಿಡಬ್ಲ್ಯೂಆರ್‌ಸಿ ಶಿಫಾರಸು ಪಾಲನೆ ಸಾಧ್ಯವಿಲ್ಲ ಎಂದು ಮನವರಿಕೆ ಮಾಡಲಿದೆ.
Advertisement
ಸಿಡಬ್ಲ್ಯೂಎಂಎ ನಿಯೋಗವನ್ನು ರಾಜ್ಯಕ್ಕೆ ಕಳಿಸಿ ಪರಿಸ್ಥಿತಿ ತಿಳಿದುಕೊಳ್ಳಬೇಕು ಜೊತೆಗೆ ಎರಡೂ ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಮನವಿ ಮಾಡುವ ಸಾಧ್ಯತೆಯಿದೆ. ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ನಿರ್ಧಾರ ಮಾಡಿದ್ದಾರೆ.
Advertisement
ಇದೇ 21 ರಂದು ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ನದಿ ವಿವಾದದ ವಿಚಾರಣೆ ನಡೆಯಲಿದ್ದು ಈ ವೇಳೆ ರಾಜ್ಯದ ಸಂಕಷ್ಟದ ಸ್ಥಿತಿ ಬಗ್ಗೆ ಮನವರಿಕೆ ಮಾಡಿ 2 ರಾಜ್ಯಗಳಿಗೂ ಸಂಕಷ್ಟ ಸೂತ್ರ ಸಿದ್ಧಪಡಿಸುವಂತೆ ಕೋರ್ಟ್ ಬಳಿ ಮನವಿ ಮಾಡಲು ಮುಂದಾಗಿದೆ ಎನ್ನಲಾಗುತ್ತಿದೆ. ಇದರೊಂದಿಗೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಂಡೊಯ್ದ ಮಧ್ಯಪ್ರವೇಶಕ್ಕೆ ಆಗ್ರಹಿಸುವ ಸಾಧ್ಯತೆಯಿದೆ.
Web Stories