ಕೊಡಗು: ಅಕ್ಟೋಬರ್ 17ರ ರಾತ್ರಿ 7:50ಕ್ಕೆ ಕಾವೇರಿ ತೀರ್ಥೋದ್ಭವಕ್ಕೆ (Cauvery Theerthodbhava) ಸಮಯ ನಿಗದಿಪಡಿಸಲಾಗಿದೆ.
ಮಡಿಕೇರಿ ತಾಲ್ಲೂಕಿನ ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವ ನಡೆಯಲಿದೆ. ಈ ಬಾರಿ ಮೇಷ ಲಗ್ನದಲ್ಲಿ ಕಾವೇರಿ ತೀರ್ಥೋದ್ಭವ ಆಗಲಿದೆ. ಇದನ್ನೂ ಓದಿ: ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ
ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಇದೆ. ಕಾವೇರಿ ತೀರ್ಥೋದ್ಭವದ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಧಾರ್ಮಿಕ ಸಂಭ್ರಮಾಚರಣೆ ನಡೆಯಲಿದೆ.
ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

