ಮಡಿಕೇರಿ: ಪ್ರತೀ ವರ್ಷದಂತೆ ಈ ವರ್ಷವೂ ಜಿಲ್ಲೆಯ ತಲಕಾವೇರಿಯಲ್ಲಿ(Talacauvery) ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ(Theerthodbhava) ಮುಹೂರ್ತ ಫಿಕ್ಸ್ ಆಗಿದೆ. ಕೊಡಗಿನ ತಲಕಾವೇರಿಯಲ್ಲಿರುವ ಬ್ರಹ್ಮಕುಂಡಿಕೆಯಲ್ಲಿ ಅಕ್ಟೋಬರ್ 17 ರಂದು ಸೋಮವಾರ ರಾತ್ರಿ 7:21ಕ್ಕೆ ಮೇಷ ಲಗ್ನದಲ್ಲಿ ಕಾವೇರಿ(Cauvery) ತೀರ್ಥ ರೂಪದಲ್ಲಿ ಕಾಣಿಸಿಕೊಳ್ಳಲಿದ್ದಾಳೆ.
ಕಾವೇರಿಯ ಉಗಮ ಸ್ಥಳ ತಲಕಾವೇರಿಯ ಪವಿತ್ರ ಕುಂಡಿಕೆಯಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ಉಕ್ಕಿ ಬರುತ್ತಾಳೆಂಬ ನಂಬಿಕೆ ಇದೆ. ಪವಿತ್ರ ತೀರ್ಥೋದ್ಭವಕ್ಕೆ ಈಗಾಗಲೇ ಸಿದ್ದತೆ ಕಾರ್ಯಗಳ ಚರ್ಚೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ
Advertisement
Advertisement
ಪ್ರತಿ ವರ್ಷವೂ ತುಲಾ ಮಾಸದಲ್ಲಿ ನಡೆಯುವ ಈ ಜಾತ್ರೆಗೆ ಸೆ.27ರಿಂದಲೇ ಸಿದ್ಧತೆ ಶುರುವಾಗುತ್ತದೆ. ಅಕ್ಟೋಬರ್ ಕಾಲಿಡುತ್ತಿದ್ದಂತೆಯೇ ಭಾಗಮಂಡಲ, ತಲಕಾವೇರಿಯಲ್ಲಿ ಸಂಭ್ರಮದ ವಾತಾವರಣ ನಿರ್ಮಾಣ ಆಗುತ್ತದೆ.
Advertisement
ಇಲ್ಲಿಯವರೆಗೆ ಕಾವೇರಿ ಭಕ್ತರ ಉತ್ಸಾಹಕ್ಕೆ ಯಾವುದೇ ಅಡ್ಡಿಯಾಗಿರಲಿಲ್ಲ. ಆದರೆ ಕಳೆದ ಎರಡು ವರ್ಷಗಳಿಂದ ಕೊರೊನಾದಿಂದ ಕಾವೇರಿ ಜಾತ್ರೆ ಸಂಪೂರ್ಣ ಕಳೆಗುಂದಿತ್ತು. ಹೆಚ್ಚಿನ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿರಲಿಲ್ಲ. ಆದರೆ ಈ ಬಾರಿ ರಾತ್ರಿ ತೀರ್ಥೋದ್ಬವ ಅಗುತ್ತಿರುವುದರಿಂದ ರಾಜ್ಯದ ನಾನಾ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಅಗಮಿಸುವ ನಿರೀಕ್ಷೆ ಇದೆ.