ನವದೆಹಲಿ: ಕಾವೇರಿ ನೀರು (Cauvery Water) ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ (Gajendra Singh Shekhawat) ಅವರೊಂದಿಗೆ ಸಭೆ ನಡೆಸಿದ್ದೇವೆ. ಸದ್ಯಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮತ್ತು ಜಲ ಸಂಪನ್ಮೂಲ ಖಾತೆ ಸಚಿವ ಡಿಕೆ ಶಿವಕುಮಾರ್ (DK Shivakumar) ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
- Advertisement 2-
ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರ ಜೊತೆಗಿನ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ನಮ್ಮ ಸಂಕಷ್ಟದ ಪರಿಸ್ಥಿತಿಯನ್ನು ಕೇಂದ್ರ ಸಚಿವರಿಗೆ ಸಮರ್ಥವಾಗಿ ತಿಳಿಸಿದ್ದೇವೆ. ಅವರ ಸ್ಪಂದನೆ ಸಕಾರಾತ್ಮಕವಾಗಿತ್ತು. ನಾವು ಪ್ರಧಾನಿ ಅವರ ಸಮಯವನ್ನೂ ಕೇಳಿದ್ದೇವೆ. ಸಮಯ ಸಿಕ್ಕರೆ ಭೇಟಿ ಆಗುತ್ತೇವೆ. ನಾಲ್ಕೂ ರಾಜ್ಯದವರನ್ನು ಕರೆಸಿ ಮಾತನಾಡಲು ಮಧ್ಯ ಪ್ರವೇಶಿಸಿ ಎಂದು ಪ್ರಧಾನಿಗೆ ಮನವಿ ಮಾಡುತ್ತೇವೆ ಎಂದರು. ಇದನ್ನೂ ಓದಿ: ಸುಪ್ರೀಂ ತೀರ್ಪಿನಲ್ಲಿ ಕರ್ನಾಟಕಕ್ಕೆ ಹಿನ್ನಡೆ- KRS ಡ್ಯಾಂ ಬಳಿ ಬಿಗಿ ಭದ್ರತೆ
- Advertisement 3-
- Advertisement 4-
ನಮಗೆ ಬೆಳೆ ರಕ್ಷಣೆ, ಕುಡಿಯುವ ನೀರು ಮತ್ತು ಕೈಗಾರಿಕೆಗಳಿಗೆ 106 ಟಿಎಂಸಿ ನೀರು ಅಗತ್ಯವಿದೆ. ಆದರೆ ನಮ್ಮ ನಾಲ್ಕೂ ಜಲಾಶಯಗಳಿಂದ ಕೇವಲ 51 ಟಿಎಂಸಿ ನೀರು ಇದೆ ಎನ್ನುವುದನ್ನು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಸಿದ್ದೇವೆ. 123 ವರ್ಷಗಳಲ್ಲೇ ಅತ್ಯಂತ ಕಡಿಮೆ ಮಳೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಬಿದ್ದು ಜಲಾಶಯಗಳ ಒಳ ಹರಿವು ಇಲ್ಲವಾಗಿದೆ ಎಂದು ಸಚಿವರ ಗಮನ ಸೆಳೆದಿದ್ದೇವೆ. ನಮ್ಮ ರೈತರು ಮತ್ತು ನಾನಾ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಬಿಡುವುದಕ್ಕೆ ನಮ್ಮ ಬಳಿ ನೀರೇ ಇಲ್ಲ ಎಂದೂ ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಶಾಕ್ – ತ.ನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ
Web Stories