ಮಂಡ್ಯ: ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ನೀರು ಸರಬರಾಜು ಮಾಡುವ ಕಾವೇರಿ (Cauvery Water) ಐದನೇ ಹಂತ ಲೋಕಾರ್ಪಣೆ ಕಾರ್ಯಕ್ರಮವನ್ನು ಅ.16ರಂದು ಮಂಡ್ಯ (Mandya) ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿ (ಟಿ.ಕೆ.ಹಳ್ಳಿ)ಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಿಎಂ ಸಿದ್ದರಾಮ್ಯಯ್ಯ (CM Siddaramaiah), ಡಿಸಿಎಂ ಡಿ.ಕೆ.ಶಿವಕುಮಾರ್ (D K Shivakumar) ಭಾಗವಹಿಸಲಿದ್ದಾರೆ.
4,336 ಕೋಟಿ ರೂ ವೆಚ್ಚದ ಸದರಿ ಯೋಜನೆಯ ಮೂಲಕ 4 ಲಕ್ಷ ಸಂಪರ್ಕ ಕಲ್ಪಿಸಲಾಗುತ್ತಿದ್ದು, 50 ಲಕ್ಷ ಫಲಾನುಭವಿಗಳಿಗೆ ನೀರು ಒದಗಿಸಲಾಗುತ್ತದೆ. 775 ಎಂಎಲ್‌ಡಿ ಹೆಚ್ಚುವರಿ ನೀರು ಪೂರೈಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ವಜಾ; ನ್ಯಾಯಾಲಯದ ತೀರ್ಪನ್ನು ಗೌರವಿಸ್ತೇವೆ: ರೇಣುಕಾಸ್ವಾಮಿ ತಂದೆ
Advertisement
Advertisement
ಈ ಉದ್ಘಾಟನೆ ಕಾರ್ಯಕ್ರಮವು ಅ.16 ರಂದು ಬೆಳಗ್ಗೆ 10:30ಕ್ಕೆ ಆರಂಭಗೊಳ್ಳಲಿದ್ದು, ಸಿಎಂ ಅವರು ಈ ಯೋಜನೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಅಂದು ಸುಮಾರು 10 ಸಾವಿರ ಜನರನ್ನು ಸೇರಿಸುವ ಗುರಿಯನ್ನು ಸಹ ಹಾಕಿಕೊಳ್ಳಲಾಗಿದೆ. ಇದನ್ನೂ ಓದಿ: ರಾಜ್ಯಪಾಲ ಗೆಹ್ಲೋಟ್‌ಗೆ ಈಗ Z ಶ್ರೇಣಿಯ ಭದ್ರತೆ
Advertisement