ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರ – ಸುಪ್ರೀಂ ಕೋರ್ಟ್‍ಗೆ ರೈತ ಸಂಘ ಅರ್ಜಿ

Public TV
1 Min Read
Darshan Puttannaiah

ಮಂಡ್ಯ: ರೈತರ ಸಂಕಷ್ಟದ ನಡುವೆಯೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿರುವ ಹಿನ್ನೆಲೆ ಕೆಆರ್‌ಎಸ್‌ನಲ್ಲಿ (KRS) ಅಹೋರಾತ್ರಿ ಧರಣಿ ನಡೆಸುತ್ತಿದ್ದ ರೈತ ಸಂಘ ಸುಪ್ರೀಂ ಕೋರ್ಟ್‍ಗೆ (Supreme Court) ಅರ್ಜಿ ಸಲ್ಲಿಸಲು ಮುಂದಾಗಿದೆ. ಕಾವೇರಿ ನೀರಿಗಾಗಿ ಕಾನೂನು ಹೋರಾಟಕ್ಕೆ ಮುಂದಾಗಿರುವ ರೈತ ಸಂಘದ (Farmers Association) ಪರವಾಗಿ ಅರ್ಜಿ ಸಲ್ಲಿಸಲು ದೆಹಲಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ (Darshan Puttannaiah) ತೆರಳಿದ್ದಾರೆ.

ಹಿರಿಯ ವಕೀಲ ರವಿವರ್ಮ ಅವರ ಮೂಲಕ ಸುಪ್ರೀಂಗೆ ಇಂದು ಅವರು ಅರ್ಜಿ ಸಲ್ಲಿಸಲಿದ್ದಾರೆ. ಕೋರ್ಟ್‍ಗೆ ಕಾವೇರಿ ಕೊಳ್ಳದ ಸಂಕಷ್ಟದ ಪರಿಸ್ಥಿತಿ ಮನವರಿಕೆ ಮಾಡಲಾಗುತ್ತದೆ. ಪ್ರಸಕ್ತ ಜಲಾಶಯದ ನೀರಿನ ಮಟ್ಟ, ರೈತರ ಬೆಳೆಗೆ ನೀರಿಲ್ಲದಿರುವ ವಸ್ತುಸ್ಥಿತಿ ಹಾಗೂ ಕುಡಿಯಲು ಅಗತ್ಯ ಇರುವ ನೀರಿನ ಬಗ್ಗೆ ಅಂಕಿ ಅಂಶಗಳನ್ನು ಅರ್ಜಿಯಲ್ಲಿ ಉಲ್ಲೇಖ ಮಾಡಲಾಗಿದೆ. ಈ ಬಗ್ಗೆ ಕೋರ್ಟ್‍ನಲ್ಲಿ ವಾದ ಮಂಡನೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದನ್ನೂ ಓದಿ: KRSನಿಂದ 7ನೇ ದಿನವೂ ತಮಿಳುನಾಡಿಗೆ ನೀರು – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆಗಳು

ಅರ್ಜಿ ಸಲ್ಲಿಕೆಗಾಗಿ ಕಳೆದ 5 ದಿನಗಳಿಂದಲೇ ಪೂರ್ವ ತಯಾರಿ ಮಾಡಲಾಗಿತ್ತು. ಈ ವಿಚಾರವಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ವಕೀಲರೊಂದಿಗೆ ಖುದ್ದು ದೆಹಲಿಗೆ ತೆರಳಿದ್ದಾರೆ. ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕಲು ಅಹೋರಾತ್ರಿ ಧರಣಿ ನಡೆಸುವ ಜೊತೆಗೆ ಕಾನೂನು ಹೋರಾಟವನ್ನು ಈ ಮೂಲಕ ಆರಂಭಿಸಿದ್ದಾರೆ. ಕಾವೇರಿ ನೀರಿಗಾಗಿ ಇಂದು ಸುಪ್ರೀಂ ಕೋರ್ಟ್ ಮೆಟ್ಟಿಲೇರಲಿರುವ ರಾಜ್ಯ ರೈತ ಸಂಘ ಅರ್ಜಿ ಸಲ್ಲಿಕೆಯಾದರೆ ಬುಧವಾರವೇ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಹಾಲಿನ ಡೈರಿ ರಾಜಕೀಯ – ಪಶು ಸಂಗೋಪನಾ ಸಚಿವರ ಸ್ವಕ್ಷೇತ್ರದಲ್ಲೇ ಹಾಲು ಚರಂಡಿ ಪಾಲು

Web Stories

Share This Article