ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು (TamilNadu Cauvery Water) ಬಿಡದಂತೆ ಆಗ್ರಹಿಸಿ ನಡೆಸುತ್ತಿರುವ ರೈತರ ಹೋರಾಟದ ಕಿಚ್ಚು ಮುಗಿಲು ಮುಟ್ಟಿದೆ. ಮಂಡ್ಯ ಬಂದ್ ಬೆನ್ನಲ್ಲೇ ಬೆಂಗಳೂರು ಬಂದ್‌ಗೂ (Bengaluru Bandh) ಭರದ ಸಿದ್ಧತೆ ನಡೆಯುತ್ತಿದೆ.
ಸೋಮವಾರ (ಸೆ.25) ಅಥವಾ ಮಂಗಳವಾರ (ಸೆ.26) ಬೆಂಗಳೂರು ಬಂದ್ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಪ್ರಾಥಮಿಕವಾಗಿ 10ಕ್ಕೂ ಹೆಚ್ಚು ಸಂಘಟನೆಗಳು ಬೆಂಗಳೂರು ಬಂದ್‌ಗೆ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಕಾವೇರಿ ಹೋರಾಟದ ಕಿಚ್ಚು; ಬಾಯಿಗೆ ಮಣ್ಣು ಹಾಕಿಕೊಂಡು ಸರ್ಕಾರದ ವಿರುದ್ಧ ರೈತರ ಆಕ್ರೋಶ
Advertisement
Advertisement
ರಾಜ್ಯ ಕಬ್ಬು ಬೆಳೆಗಾರರ ಸಂಘ, ಆಮ್ ಆದ್ಮಿ ಪಕ್ಷ (AAP), ಕನ್ನಡ ಚಳುವಳಿ ಕೇಂದ್ರ ಸಮಿತಿ, ಜಯಕರ್ನಾಟಕ ಸಂಘಟನೆ, ತಲಕಾಡು ಸಂಶೋಧಕರ ಸಂಘ, ರಾಷ್ಟ್ರೀಯ ಚಾಲಕರ ಒಕ್ಕೂಟ, ಕನ್ನಡಪರ ಹೋರಾಟಗಾರರ ಸಂಘ, ಬಿಬಿಎಂಪಿ (BBMP) ನೌಕರರ ಕ್ಷೇಮಾಭಿವೃದ್ಧಿ ಸಂಘ, ತಮಿಳುಸಂಘ, ಕೆಂಪೇಗೌಡ ಸಮಿತಿ, ರಾಜಸ್ಥಾನಿ ಭಾಷಿಕರ ಸಂಘ, ಕರ್ನಾಟಕ ರಕ್ಷಣಾ ಸೇನೆ ಸೇರಿದಂತೆ ಹಲವು ಸಂಘಟನೆಗಳು ಈಗಾಗಲೇ ಬೆಂಬಲ ಸೂಚಿಸಿವೆ. ಇದನ್ನೂ ಓದಿ: ಕಾವೇರಿ ನದಿ ನೀರಿನ ವಿಷಯದಲ್ಲಿ ನಾವು ಮೇಲ್ಮನವಿ ಸಲ್ಲಿಸಬೇಕು: ಬಿಎಸ್‍ವೈ
Advertisement
Advertisement
ಬೆಂಗಳೂರು ಬಂದ್ ಭರದ ಸಿದ್ಧತೆ ನಡೆಸಲಾಗುತ್ತಿದೆ. ಆದ್ರೆ ಅಧಿಕೃತ ದಿನಾಂಕ ಇನ್ನೂ ಘೋಷಣೆಯಾಗಿಲ್ಲ.
Web Stories