ಬೆಂಗಳೂರು: ಇಂದಿನಿಂದ ಮೂರು ದಿನಗಳ ಕಾಲೇ ಬೆಂಗಳೂರು (Bengaluru) ನಗರದಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
ಜಲಮಂಡಳಿ (Water board) ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿದೆ. ಈ ಹಿನ್ನೆಲೆ ಕಾವೇರಿ ನೀರು ಸರಬರಾಜು ಯೋಜನೆಯ ವಿವಿಧ ಹಂತಗಳ ಜಲರೇಚಕ ಯಂತ್ರಾಗಾರಗಳನ್ನು ಇಂದಿನಿಂದ ಸೆಪ್ಟೆಂಬರ್ 17ರ ವರೆಗೆ ಸ್ಥಗಿತಗೊಳಿಸಲಾಗುತ್ತಿದೆ. ಹೀಗಾಗಿ ಇಂದಿನಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ ರಾಮ್ ಪ್ರಸಾತ್ ಮನೋಹರ್ ಬೆಂಗಳೂರಿಗರಿಗೆ ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಕೇಸ್ | ಷಡ್ಯಂತ್ರ ಮಾಡಿದವ್ರನ್ನ ಮುಟ್ಟೋಕೆ ಎಸ್‍ಐಟಿಗೆ ಧೈರ್ಯ ಇಲ್ಲ: ಬೊಮ್ಮಾಯಿ
ಸೆಪ್ಟೆಂಬರ್ 15 ರಿಂದ 17ನೇ ತಾರೀಖಿನವರೆಗೂ ಕಾವೇರಿ ನೀರು ಸರಬರಾಜು ಸ್ಥಗಿತ ಆಗ್ತಿದೆ. ಗ್ರೇಟರ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡೆತಡೆಯಿಲ್ಲದೇ ಕುಡಿಯುವ ನೀರನ್ನು ಸರಬರಾಜು ಮಾಡುವ ಹಿನ್ನೆಲೆ. ಕಾವೇರಿ ನೀರು ಸರಬರಾಜು ಯೋಜನೆಯ ಜಲರೇಚಕ ಯಂತ್ರಾಗಾರಗಳು ಸ್ಥಗಿತವಾಗಲಿದೆ. ಇದನ್ನೂ ಓದಿ: ‘ಮತಾಂತರ ಅವರ ಹಕ್ಕು’ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಕಿಡಿ – ಜಾತಿಗಣತಿ ಮತಾಂತರ ಕಾಲಂಗೆ ಆಕ್ಷೇಪ
ಇನ್ನೂ ಮುಖ್ಯ ಕೊಳವೆ ಮಾರ್ಗಗಳ ಸುಲಲಿತ ಚಾಲನೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ಸುಸ್ಥಿತಿಯಲ್ಲಿಡುವ ಉದ್ದೇಶದಿಂದ ಜಲಮಂಡಳಿಯು ವಿವಿಧೆಡೆ ನಿಯಮಿತ ತುರ್ತು ನಿರ್ವಹಣೆಯ ಕಾಮಗಾರಿಗಳನ್ನು ಕೈಗೊಳ್ಳುತ್ತಿದ್ದು, ಜನ ಮೂರು ದಿನಗಳಿಗೆ ಆಗುವಷ್ಟು ನೀರನ್ನ ಸಂಗ್ರಹ ಮಾಡಿಕೊಳ್ಳಲು ಸಂದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆಯುವ ಸುಳಿವು ನೀಡಿದ್ರಾ ಸಿಎಂ?


