ದಾವಣಗೆರೆ: ಲಂಚ ಪಡೆದು ಎ++ ಗ್ರೇಡ್ ನೀಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ದಾವಣಗೆರೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಗಾಯತ್ರಿ ದೇವರಾಜ ಸೇರಿದಂತೆ 10 ಜನರನ್ನು ಸಿಬಿಐ ಬಂಧಿಸಿದೆ.
10 ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (NAAC) ತಂಡದ ಅಧ್ಯಕ್ಷರು ಮತ್ತು JNU ಪ್ರೊಫೆಸರ್ ಸೇರಿದಂತೆ ಶಿಕ್ಷಣ ಸಂಸ್ಥೆಯ ಅಧಿಕಾರಿಗಳು ಸೇರಿದಂತೆ 10 ಸದಸ್ಯರನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಬಸಂತ ಪಂಚಮಿ – ಪ್ರಯಾಗ್‌ರಾಜ್‌ನಲ್ಲಿ ಸೋಮವಾರ 3 ಕೋಟಿ ಭಕ್ತರಿಂದ ಪವಿತ್ರ ಸ್ನಾನ
Advertisement
Advertisement
ಆಂಧ್ರಪ್ರದೇಶದ ಗುಂಟೂರಿನಲ್ಲಿ ಕೆಎಲ್‌ಇಎಫ್ ವಿವಿಗೆ ನ್ಯಾಕ್ ಗ್ರೇಡ್ ಕೊಡುವ ವಿಚಾರದಲ್ಲಿ ಲಂಚ ಸ್ವೀಕರಿಸಿದ್ದರು. ಗಾಯತ್ರಿ ದೇವರಾಜ್ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸದ್ಯ ಮೈಕ್ರೋ ಬಯೋಲಜಿ ಪ್ರಾಧ್ಯಾಪಕಿಯಾಗಿದ್ದರು. ಅಲ್ಲದೇ ಭ್ರಷ್ಟಾಚಾರ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಮುಂದುವರಿದಿದೆ. ಇದನ್ನೂ ಓದಿ: Ramanagara | ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟೈಯರ್ ಫ್ಯಾಕ್ಟರಿಗೆ ಬೆಂಕಿ – ತಪ್ಪಿದ ಭಾರೀ ಅನಾಹುತ
Advertisement
Advertisement
ಪ್ರಕರಣದ ತನಿಖೆ ನಡೆಸುತ್ತಿರುವಾಗ, ಚೆನ್ನೈ, ಬೆಂಗಳೂರು, ವಿಜಯವಾಡ, ಪಲಮು, ಸಂಬಲ್‌ಪುರ, ಭೋಪಾಲ್, ಬಿಲಾಸ್‌ಪುರ, ಗೌತಮ್ ಬುದ್ಧ ನಗರ ಮತ್ತು ನವದೆಹಲಿ ಸೇರಿದಂತೆ ದೇಶಾದ್ಯಂತ 20 ಸ್ಥಳಗಳಲ್ಲಿ ಸಿಬಿಐ ದಾಳಿ ನಡೆಸಿತು. ಈ ವೇಳೆ 37 ಲಕ್ಷ ರೂಪಾಯಿ ನಗದು, 6 ಲ್ಯಾಪ್‌ಟಾಪ್‌ಗಳು, ಐಫೋನ್ 16 ಪ್ರೊ, ಚಿನ್ನದ ನಾಣ್ಯ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ISRO | ಯಶಸ್ವಿಯಾಗಿ ಉಡಾವಣೆಯಾಗಿದ್ದ ಇಸ್ರೋದ 100ನೇ ರಾಕೆಟ್‌ನಲ್ಲಿ ತಾಂತ್ರಿಕ ದೋಷ