ಭುವನೇಶ್ವರ್: ಒಡಿಶಾ (Odisha) ರೈಲು ದುರಂತ (Train Crash) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈಲ್ವೇ (Railway) ಸಿಬ್ಬಂದಿಗಳನ್ನು ಸಿಬಿಐ (CBI) ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.
ಬಂಧಿತರನ್ನು ಹಿರಿಯ ಸೆಕ್ಷನ್ ಇಂಜಿನಿಯರ್ ಅರುಣ್ ಕುಮಾರ್ ಮಹಂತ, ಸೆಕ್ಷನ್ ಇಂಜಿನಿಯರ್ ಮೊಹಮ್ಮದ್ ಅಮೀರ್ ಖಾನ್ ಮತ್ತು ಟೆಕ್ನಿಶಿಯಲ್ ಪಪ್ಪು ಕುಮಾರ್ ಎಂದು ಗುರುತಿಸಲಾಗಿದೆ. ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ 304 (ಅಪರಾಧಿಕ ಮಾನವ ಹತ್ಯೆ) ಮತ್ತು 201 (ಸಾಕ್ಷ್ಯ ನಾಶ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ – ಸಿಗ್ನಲಿಂಗ್, ಟ್ರಾಫಿಕ್ ಕಂಟ್ರೋಲ್ ವಿಭಾಗಗಳೇ ಹೊಣೆ
ಒಂದು ತಿಂಗಳ ತನಿಖೆ ನಡೆಸಿರುವ ಸಿಬಿಐ ಬಂಧಿತರ ಮೇಲೆ ಕಠಿಣ ಸೆಕ್ಷನ್‍ಗಳನ್ನು ಹಾಕಿ ಬಂಧಿಸಿದೆ. ಒಡಿಶಾ ಪೊಲೀಸರು ಈ ಮೊದಲು ದಾಖಲಿಸಿದ್ದ ಎಫ್‍ಐಆರ್ ಇದರಲ್ಲಿ ಅನ್ವಯಿಸಿಲ್ಲ. ಮೂವರು ಆರೋಪಿಗಳು ಈ ಅಪಘಾತಕ್ಕೆ ಹೇಗೆ ಪಾತ್ರರು ಎಂಬುದನ್ನು ಅಧಿಕಾರಿಗಳು ತಿಳಿಸಿಲ್ಲ. ಆದರೆ ಘಟನೆಗೆ ಕಾರಣರಾದವರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವಾರ ಸಿಆರ್‍ಎಸ್ ವರದಿಯಲ್ಲಿ ತಾಂತ್ರಿಕ ಸಮಸ್ಯೆಯಿಂದ ಅಪಘಾತ ಸಂಭವಿಸಿದ್ದನ್ನು ತಳ್ಳಿ ಹಾಕಲಾಗಿತ್ತು. ಅಲ್ಲದೇ ಅಪಘಾತಕ್ಕೆ ಮಾನವ ದೋಷವೇ ಕಾರಣ ಎಂದು ಉಲ್ಲೇಖಿಸಲಾಗಿತ್ತು. ಈ ಘಟನೆಯ ಹಿಂದೆ ಏನಾದರೂ ಸಂಚು ಅಥವಾ ಪಿತೂರಿ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಒಡಿಶಾದ ಬಾಲಸೋರ್‍ನ ಬಹನಾಗ್ ರೈಲ್ವೇ ನಿಲ್ದಾಣದಲ್ಲಿ ಜೂನ್ 2 ರಂದು ಸಂಜೆ 6:56 ರ ಸುಮಾರಿಗೆ ಕೋರಮಂಡಲ್ ಎಕ್ಸ್‍ಪ್ರೆಸ್ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ಪರಿಣಾಮ ಬೋಗಿಗಳು ಪಕ್ಕದ ಟ್ರ್ಯಾಕ್‍ನಲ್ಲಿ ಉರುಳಿ ಬಿದ್ದಿದ್ದವು. ಇದೇ ಸಮಯದಲ್ಲಿ ಆ ಮಾರ್ಗದಲ್ಲಿ ಹಾದು ಹೋಗುತ್ತಿದ್ದ ಹೌರಾದಿಂದ ಹೊರಟ ಯಶವಂತಪುರ ಎಕ್ಸ್‍ಪ್ರೆಸ್ ಬೋಗಿಗಳಿಗೆ ಡಿಕ್ಕಿಯಾಗಿತ್ತು. ಈ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದರು. ಈ ಅಪಘಾತದ ನಂತರ ಕೆಲವು ಅಧಿಕಾರಿಗಳನ್ನು ಅಲ್ಲಿಂದ ವರ್ಗಾಯಿಸಲಾಗಿತ್ತು. ಇದನ್ನೂ ಓದಿ: ಸಿದ್ದರಾಮಯ್ಯ Vs ಬೊಮ್ಮಾಯಿ – ಯಾವ ಇಲಾಖೆಗೆ ಎಷ್ಟು ಕೋಟಿ ಅನುದಾನ ಸಿಕ್ಕಿದೆ?
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]