ನವದೆಹಲಿ: ದೆಹಲಿ ಮದ್ಯ ಹಗರಣಕ್ಕೆ (Delhi Liquor Scam) ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಸಿಬಿಐನಿಂದ (CBI) ಈಗ ಬಂಧನಕ್ಕೆ ಒಳಗಾಗಿದ್ದಾರೆ.
ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲಿನಲ್ಲಿ (Tihar Jail) ಇದ್ದಾರೆ. ಸಿಬಿಐ ಸೋಮವಾರ ತಿಹಾರ್ ಜೈಲಿನಲ್ಲೇ ಅರವಿಂದ್ ಕೇಜ್ರಿವಾಲ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದೆ. ಇದನ್ನೂ ಓದಿ: ಇಡಿ ವಿವರಣೆ ಪರಿಗಣಿಸಲು ಟ್ರಯಲ್ ಕೋರ್ಟ್ ವಿಫಲ – ಕೇಜ್ರಿವಾಲ್ ಜಾಮೀನಿಗೆ ತಡೆ
Advertisement
Advertisement
केंद्र की भाजपा सरकार ने सीबीआई के साथ मिलकर रची बड़ी साज़िश! pic.twitter.com/C6OLNLA6bQ
— Sanjay Singh AAP (@SanjayAzadSln) June 25, 2024
ಕಳೆದ ವಾರ ತಿಹಾರ್ ಜೈಲಿನಲ್ಲಿ ಕೇಜ್ರಿವಾಲ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ಅನುಮತಿ ಕೋರಿತ್ತು. ಬುಧವಾರ ಸಂಬಂಧಪಟ್ಟ ವಿಚಾರಣಾ ನ್ಯಾಯಾಲಯದ ಮುಂದೆ ಅರವಿಂದ್ ಕೇಜ್ರಿವಾಲ್ ಅವರನ್ನು ಹಾಜರುಪಡಿಸಲು ಸಿಬಿಐ ಅನುಮತಿಯನ್ನು ಪಡೆದುಕೊಂಡಿದೆ. ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಸಂಬಂಧಿಸಿದಂತೆ ಮತ್ತಷ್ಟು ಸಾಕ್ಷ್ಯಗಳು ಲಭ್ಯವಾಗಿದೆ ಎಂದು ಸಿಬಿಐ ಕೋರ್ಟ್‌ಗೆ ತಿಳಿಸಿದೆ.
Advertisement
Advertisement
ಆಪ್ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಪ್ರತಿಕ್ರಿಯಿಸಿ, ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಸಿಗುವ ಸಾಧ್ಯತೆ ಇರುವಾಗ ದೆಹಲಿ ಸಿಎಂ ವಿರುದ್ಧ ನಕಲಿ ಸಿಬಿಐ ಪ್ರಕರಣವನ್ನು ದಾಖಲಿಸಿ ಬಂಧಿಸಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ಮೂಲಗಳು ನನಗೆ ತಿಳಿಸಿವೆ. ಇಡೀ ರಾಷ್ಟ್ರವು ಇದನ್ನು ನೋಡಬಹುದು ಮತ್ತು ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ.