– ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ
ಕೋಲ್ಕತ್ತಾ: ಹಣಕಾಸು ಅವ್ಯವಹಾರ ಪ್ರಕಣದಲ್ಲಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ಆರ್.ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ (Kolkata’s RG Kar hospital) ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರನ್ನ ಕೇಂದ್ರೀಯ ತನಿಖಾ ದಳ (CBI) ಬಂಧಿಸಿದೆ.
ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರ ನಾಶ ಆರೋಪಕ್ಕೆ ಆರೋಪದ ಮೇಲೆ ಸಂದೀಪ್ ಘೋಷ್ ಅವರನ್ನ ಬಂಧಿಸಿರುವುದಾಗಿ ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಭೀಕರ ಅಪಘಾತ – 6 ಯಾತ್ರಾರ್ಥಿಗಳು ದುರ್ಮರಣ
ಜೊತೆಗೆ ಎಫ್‌ಐಆರ್ ದಾಖಲಿಸಲು ವಿಳಂಬ ಹಾಗೂ ಸಾಕ್ಷ್ಯ ನಾಶ ಮತ್ತು ಪ್ರಕರಣದ ದಾರಿ ತಪ್ಪಿಸಿದ ಆರೋಪದ ಮೇಲೆ ತಲಾ ಪೊಲೀಸ್ ಠಾಣೆಯ ಅಧಿಕಾರಿ ಅಭಿಜಿತ್ ಮೊಂಡಲ್ ಅವರನ್ನೂ ಸಿಬಿಐ ಬಂಧಿಸಿದೆ. ಇದನ್ನೂ ಓದಿ: ಆರ್ಥಿಕ ಅವ್ಯವಹಾರಗಳ ಸಿಬಿಐ ತನಿಖೆ ಪ್ರಶ್ನಿಸಿ ಸಂದೀಪ್ ಘೋಷ್ ಸಲ್ಲಿಸಿದ್ದ ಅರ್ಜಿ ವಜಾ
ಇದೇ ತಿಂಗಳ ಸೆಪ್ಟೆಂಬರ್ 2ರಂದು ಆರ್.ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದ ಹಣಕಾಸು ಅಕ್ರಮಗಳಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಸಿಬಿಐ ಬಂಧಿಸಿತ್ತು. ಬಳಿಕ ಆರ್ಥಿಕ ಅವ್ಯವಹಾರಗಳ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಕೋಲ್ಕತ್ತಾ ಹೈಕೋರ್ಟ್ (Kolkata High Court) ಆದೇಶವನ್ನು ಪ್ರಶ್ನಿಸಿ ಘೋಷ್ (Sandip Ghosh) ಅರ್ಜಿ ಸಲ್ಲಿಸಿದ್ದರು, ಈ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.
ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹ:
ಸದ್ಯ ಪೊಲೀಸ್ ಅಧಿಕಾರಿ ಮೊಂಡಲ್ ಅವರ ಬಂಧನದ ಬೆನ್ನಲ್ಲೇ ಸಿಎಂ ಮಮತಾ ಬ್ಯಾನರ್ಜಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಕೋಲ್ಕತ್ತಾ ಪೊಲೀಸ್ ಆಯುಕ್ತರನ್ನ ತಕ್ಷಣವೇ ಕರ್ತವ್ಯದಿಂದ ಅಮಾನತುಗೊಳಿಸಬೇಕು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿಯೇ ಸಾಕ್ಷಾತ್ ವಿಶ್ವನಾಥ, ಅದನ್ನು ಮಸೀದಿ ಎನ್ನುವುದು ವಿಷಾದನೀಯ: ಯೋಗಿ ಆದಿತ್ಯನಾಥ್
ಕಳೆದ ತಿಂಗಳು ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಗಡುವು ನೀಡಿತ್ತು. ಸೆ.17ರಂದು ಗಡುವು ಮುಕ್ತಾಯವಾಗಲಿದ್ದು, ಅಂದೇ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ.