ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮಾಜಿ ನೌಕರ ಹಾಗೂ ಅವರ ಪುತ್ರನನ್ನು ಸಿಬಿಐ (CBI) ಪೊಲೀಸರು ಬಂಧಿಸಿದ್ದಾರೆ.
ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್ ಸಲಹಾ ಸೇವೆ (WAPCOS) ಲಿಮಿಟೆಡ್‍ನ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ರಾಜೇಂದರ್ ಕುಮಾರ್ ಗುಪ್ತಾ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿತ್ತು. ಅವರಿಗೆ ಸೇರಿದ ವಿವಿಧ ರಾಜ್ಯಗಳ 19 ಸ್ಥಳಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ 38.38 ಕೋಟಿ ರೂ. ನಗದು ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ರಾಜಿಂದರ್ ಕುಮಾರ್ ಗುಪ್ತಾ ಮತ್ತು ಅವರ ಪುತ್ರ ಗೌರವ್ ಸಿಂಗಲ್ ಅವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದೆ. ಇದನ್ನೂ ಓದಿ: 12ನೇ ತರಗತಿ ಓದಿ ದಿನಕ್ಕೆ 10 ಕೋಟಿ ಸಂಪಾದನೆ – ಸೈಬರ್ ಕಿರಾತಕರು ಅಂದರ್
Advertisement
CBI arrests former CMD of WAPCOS, Rajinder Kumar Gupta and his son Gaurav Singal for alleged possession of disproportionate assets and recovered Rs 38.38 crore during a raid conducted at their multiple locations pic.twitter.com/LHVio90TTq
— ANI (@ANI) May 3, 2023
Advertisement
ಇತ್ತೀಚೆಗಷ್ಟೇ ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಗುಪ್ತಾ ಹಾಗೂ ಅವರ ಕುಟುಂಬದ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು. ಇದಾದ ಬಳಿಕ ದಾಳಿ ನಡೆಸಿದ ಅಧಿಕಾರಿಗಳು ನಗದು ಸೇರಿದಂತೆ ಹಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದರು. ಮಾಜಿ ನೌಕರ ಕೇಂದ್ರ ಜಲಶಕ್ತಿ ಸಚಿವಾಲಯದ (Ministry of Jal Shakti) ಅಡಿಯಲ್ಲಿ ಕಾರ್ಯನಿರ್ವಹಿಸುವ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇದನ್ನೂ ಓದಿ: ಕೇಂದ್ರದ ಮಾಜಿ ನೌಕರನ ಮನೆ ಮೇಲೆ ಸಿಬಿಐ ದಾಳಿ – 20 ಕೋಟಿ ವಶ