ಕೋಲ್ಕತ್ತಾ: ಜಾನುವಾರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಸಹಾಯಕನಾಗಿರುವ ಟಿಎಂಸಿ ಬಿರ್‌ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮೊಂಡಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ.
ಟಿಎಂಸಿ ನಾಯಕನನ್ನು ಸದ್ಯ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಇಂದು ಮುಂಜಾನೆ ಸಿಬಿಐ ತಂಡವೊಂದು ಬಿರ್‌ಭೂಮ್‌ನ ಬೋಲ್‌ಪುರದಲ್ಲಿರುವ ಮೊಂಡಲ್ ಅವರ ನಿವಾಸಕ್ಕೆ ಆಗಮಿಸಿತ್ತು. ಇದನ್ನೂ ಓದಿ: ಜಾನುವಾರು ಅಕ್ರಮ ಸಾಗಣೆ ಪ್ರಕರಣ – ಟಿಎಂಸಿ ಹಿರಿಯ ನಾಯಕನಿಗೆ ಸಿಬಿಐ ಸಮನ್ಸ್
Advertisement
Advertisement
ಆಗಸ್ಟ್ 5 ರಂದು ಜಾನುವಾರು ಅಕ್ರಮ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಮೊಂಡಲ್‌ಗೆ ನೋಟಿಸ್ ಕಳುಹಿಸಿತ್ತು. ಆಗಸ್ಟ್ 8 ರಂದು ಕೋಲ್ಕತ್ತಾದ ನಿಜಾಮ್ ಪ್ಯಾಲೇಸ್‌ನಲ್ಲಿರುವ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು.
Advertisement
Advertisement
ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ 21 ರಂದು ಸಿಬಿಐ ಗಡಿ ಭದ್ರತಾ ಪಡೆ (ಬಿಎಸ್ಎಫ್) ಮಾಜಿ ಕಮಾಂಡೆಂಟ್ ಅವರನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆಯ ಮಮತಾ ಬ್ಯಾನರ್ಜಿ ಆಪ್ತ ಸಹಾಯಕ ಮೊಂಡಲ್ ಅವರ ಹೆಸರು ಕೇಳಿಬಂದಿತ್ತು ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯಲ್ಲಿ ಇನ್ಮುಂದೆ ಮಾಸ್ಕ್ ಧರಿಸದಿದ್ದರೆ 500ರೂ. ದಂಡ