LatestMain PostNational

ಲಂಚ ಆರೋಪ – ಹೈಕೋರ್ಟ್ ನಿವೃತ್ತ ಜಡ್ಜ್ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಕೆ

ಲಕ್ನೋ: ಖಾಸಗಿ ವೈದ್ಯಕೀಯ ಕಾಲೇಜೊಂದರ ಪರವಾಗಿ ತೀರ್ಪು ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನಾರಾಯಣ್ ಶುಕ್ಲಾ ಅವರ ವಿರುದ್ಧ ಸಿಬಿಐ ಚಾರ್ಜ್‍ಶೀಟ್ ಸಲ್ಲಿಸಿದೆ.

ಶುಕ್ಲಾ, ಚಂಡೀಗಢ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಐ.ಎಂ.ಖುದ್ದಿಸಿ ಸೇರಿದಂತೆ ಇತರೆ ಮೂವರ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ. ಎಫ್‍ಐಆರ್‌ನಲ್ಲಿ ಉಲ್ಲೇಖಿಸಿರುವ ಆರೋಪಗಳನ್ನು ಸಾಕ್ಷ್ಯಗಳ ಮೂಲಕ ದೃಢಪಡಿಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್‌ನಲ್ಲಿ ಶೀಘ್ರವೇ 1 ನಿಮಿಷದ ಸ್ಟೋರಿ ಹಾಕಬಹುದು!

ಇದು 2017ರ ಪ್ರಕರಣಕ್ಕೆ ಸಂಬಂಧಿಸಿದ ವಿಷಯವಾಗಿದೆ. 2019ರ ಡಿಸೆಂಬರ್‌ನಲ್ಲಿ ದಾಖಲಾಗಿದ್ದ ಎಫ್‍ಐಆರ್‌ನಲ್ಲಿ, ಆಗ ನ್ಯಾಯಾಧೀಶರಾಗಿದ್ದ ಶುಕ್ಲಾ ಅವರನ್ನು ಸೇರಿ ಇತರ ಆರು ಮಂದಿಯನ್ನು ಆರೋಪಿಗಳೆಂದು ಘೋಷಿಸಲಾಗಿತ್ತು.

ಪ್ರಸಾದ್ ವೈದ್ಯಕೀಯ ವಿಜ್ಞಾನ ಸಂಸ್ಥೆಯು ಪ್ರಸಾದ್ ಎಜುಕೇಷನ್ ಟ್ರಸ್ಟ್ (ಪಿಇಟಿ)ನಿಂದ ನಡೆಯುತ್ತಿತ್ತು. ಬಿ.ಪಿ.ಯಾದವ್, ಪ್ರಸಾದ್ ಯಾದವ್, ಸುಧೀರ್ ಗಿರಿ ಅವರ ಒಡೆತನದ ಸಂಸ್ಥೆ ಇದಾಗಿತ್ತು. ಸೌಲಭ್ಯಗಳ ಕೊರತೆಯಿಂದಾಗಿ ಎರಡು ವರ್ಷಗಳ ಕಾಲವಿದ್ಯಾರ್ಥಿಗಳಿಗೆ ಪ್ರವೇಶ ನೀಡದಂತೆ 46 ಕಾಲೇಜುಗಳಿಗೆ 2017ರಲ್ಲಿ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿತ್ತು. ಆ ಕಾಲೇಜುಗಳ ಪೈಕಿ ಪ್ರಸಾದ್ ವೈದ್ಯಕೀಯ ವಿಜ್ಞಾನ ಸಂಸ್ಥೆಯೂ ಸೇರಿತ್ತು. ಇದನ್ನೂ ಓದಿ: ಪ್ರಧಾನಿ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಕಾಲೇಜು, ಸುಪ್ರೀಂ ಕೋರ್ಟ್ ಮೊರೆ ಹೋಯಿತು. ಕಾಲೇಜು ಪರಿಕರಗಳನ್ನು ಪುನಃ ಪರಿಶೀಲಿಸಲು ನಿರ್ದೇಶಿಸುವಂತೆ ಕೋರ್ಟ್‍ಗೆ ಮನವಿ ಮಾಡಿತ್ತು. ಕಾಲೇಜು ಮಂಡಳಿಯವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಖುದ್ದಿಸಿ ಮತ್ತು ಭಾವನಾ ಪಾಂಡೆ ಅವರೊಟ್ಟಿಗೆ ಸಂರ್ಪಕ ಸಾಧಿಸಿದ್ದರು. ಅಲ್ಲದೇ ಸಮಸ್ಯೆ ಇತ್ಯರ್ಥಪಡಿಸುವುದಾಗಿ ಭರವಸೆ ಕೂಡ ನೀಡಿದ್ದರು.

Leave a Reply

Your email address will not be published.

Back to top button